ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ ಮಾಹಿತಿ ಕೊಡಿ ಇಲ್ಲವೇ ಹಕ್ಕುಚ್ಯುತಿ ಎದುರಿಸಿ: ಶಾಸಕ ಕುಮಾರ್‌ ಬಂಗಾರಪ್ಪ

ಕೆಡಿಪಿ ಸಭೆ: ನೌಕರರ ಸಂಘದ ಅಧ್ಯಕ್ಷರ ವಿರುದ್ಧ ಶಾಸಕ ಕುಮಾರ್‌ ಬಂಗಾರಪ್ಪ ಕಿಡಿ
Last Updated 25 ಜನವರಿ 2023, 21:22 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಸೊರಬ ತಾಲ್ಲೂಕಿನಿಂದ ನಾಲ್ಕು ವರ್ಷಗಳಲ್ಲಿ 14 ಜನ ತಹಶೀಲ್ದಾರರು ವರ್ಗಾವಣೆ ಆಗಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದವರು ಅಪಪ್ರಚಾರ ಮಾಡುತ್ತಿದ್ದಾರೆ. ವರ್ಗಾವಣೆ ಆದವರ ಪಟ್ಟಿಕೊಡಬೇಕು; ಇಲ್ಲವೇ ಜನರಿಗೆ ತಪ್ಪು ಮಾಹಿತಿ ಕೊಟ್ಟಿದ್ದಕ್ಕೆ ಕ್ಷಮೆ ಕೇಳಬೇಕು. ಇದಕ್ಕೆ ತಪ್ಪಿದಲ್ಲಿ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡಿಸುತ್ತೇನೆ’ ಎಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಎಚ್ಚರಿಸಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ‘ಕಂದಾಯ ಇಲಾಖೆ ನೌಕರರು ನಮ್ಮ ವಿರುದ್ಧ ಮಂಗಳವಾರ ಶಿವಮೊಗ್ಗದಲ್ಲಿ ನಡೆಸಿದ ಪ್ರತಿಭಟನೆ ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ರಾಜಕೀಯ ಪಕ್ಷದವರಂತೆ ಮಾತನಾಡ ಬಾರದು. ನಾಲಿಗೆ ಹಿಡಿತದಲ್ಲಿ ಇಟ್ಟು ಕೊಳ್ಳಬೇಕು. ಈ ರೀತಿ ಮಾಡುವುದಾದರೆ ಶಾಸಕರು ಕೆಲಸ ಮಾಡುವುದು ಹೇಗೆ? ನಾವು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರನ್ನು ಕೇಳಿ ಕೆಲಸ ಮಾಡಬೇಕೇ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT