ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್.ಎಂ.ವಿ. ಕಾಲೇಜಿಗೆ ಕುಸ್ತಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ

Published 26 ಜುಲೈ 2023, 13:09 IST
Last Updated 26 ಜುಲೈ 2023, 13:09 IST
ಅಕ್ಷರ ಗಾತ್ರ

ಭದ್ರಾವತಿ: ಕುವೆಂಪು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿಗೆ ಚಿನ್ನದ ಪದಕ ಲಭಿಸಿದೆ.

ಜುಲೈ 24 ಮತ್ತು 25 ರಂದು ಆಯನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಂದ್ಯಾವಳಿಯಲ್ಲಿ ಈ ಕಾಲೇಜಿನ 22 ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಯಶ್ವಂತ್ 79 ಕೆ.ಜಿ. ವಿಭಾಗದಲ್ಲಿ ಚಿನ್ನದ ಪದಕ, ಪವನ್ 125 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ, ಮನು ಮಂತೋರೆ 92 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ, ಸೈಯದ್ ಕೊನ್ನೀರ್ 65 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ, ಸಾಹಿಲ್ ಸಾಬ್ 97 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ, ಅಮೀನ್ ಉಲ್ಲಾ ಹುಸೇನ್ 97 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೈಲಜಾ ಎಸ್. ಹೊಸಳ್ಳಿ ಹಾಗೂ ಡಾ. ನಾಸಿರ್ ಖಾನ್ ಟಿ.ಎಂ., ಕ್ರೀಡಾ ವಿಭಾಗದ ಮುಖ್ಯಸ್ಥ ಡಾ. ಶಿವರುದ್ರಪ್ಪ ಎಚ್.ಎಸ್. ಮತ್ತು ದೈಹಿಕ ಶಿಕ್ಷಣ ವಿಭಾಗದ ಉಪನ್ಯಾಸಕರು ಶಫಿ, ಯೋಗೇಶ್, ದೇವರಾಜ ಅರಸ್ ಜಿ.ಎನ್., ದಿಲೀಪ್ ಪಿ.ಎ ಮತ್ತು ಅಧ್ಯಾಪಕ ವೃಂದದವರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT