ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ಸ್ಪರ್ಧೆಗೆ ಅಭೂತಪೂರ್ವ ಬೆಂಬಲ: ವಾಟಗೋಡು ಸುರೇಶ್

Published 4 ಏಪ್ರಿಲ್ 2024, 14:13 IST
Last Updated 4 ಏಪ್ರಿಲ್ 2024, 14:13 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗದ ನೇತಾರ ಕೆ.ಎಸ್. ಈಶ್ವರಪ್ಪ ಅವರಿಗೆ ಹೊಸನಗರ ತಾಲ್ಲೂಕಿನಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೆ.ಎಸ್. ಈಶ್ವರಪ್ಪ ಸ್ವಾಭಿಮಾನಿ ಬಳಗದ ಸಂಚಾಲಕ ವಾಟಗೋಡು ಸುರೇಶ್ ಮತ್ತು ತ.ಮ.ನರಸಿಂಹ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಮೇಲ್ವರ್ಗದ ಬಲಾಢ್ಯರು ಕುಟುಂಬ ರಾಜಕಾರಣಕ್ಕೆ ಸೀಮಿತಗೊಳಿಸಿ, ಪಕ್ಷದ ನೈಜ ಸಿದ್ಧಾಂತಕ್ಕೆ ತಿಲಾಂಜಲಿ ಇಟ್ಟಿದ್ದಾರೆ ಎಂದರು.

ರಾಷ್ಟ್ರಮಟ್ಟದಲ್ಲಿ ಹೆಮ್ಮರವಾಗಿ ಬೆಳೆದಿದೆ. ರಾಜ್ಯದಲ್ಲಿ ಕುಟುಂಬ ರಾಜಕಾರಣದ ಕಪಿಮುಷ್ಠಿಗೆ ಸಿಲುಕಿ ಪಕ್ಷ ನೆಲೆ ಕಳೆದುಕೊಳ್ಳುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಪಕ್ಷದ ಶುದ್ಧೀಕರಣಕ್ಕಾಗಿ ನಡೆಸುತ್ತಿರುವ ಈಶ್ವರಪ್ಪ ಅವರ ಹೋರಾಟಕ್ಕೆ ಸ್ವಾಭಿಮಾನಿ ಕೆ.ಎಸ್. ಈಶ್ವರಪ್ಪ ಬಳಗ ಬೆಂಬಲಿಸಲಿದೆ ಎಂದು ಸಂಚಾಲಕ ವಾಟ್‌ಗೋಡ್ ಸುರೇಶ್ ಹೇಳಿದರು. ಶಿವಮೊಗ್ಗ, ಸಾಗರದಲ್ಲಿ ಈಗಾಗಲೇ ಲೋಕಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯ ತೆರೆಯಲಾಗಿದೆ. ಬೈಂದೂರು ಸೇರಿದಂತೆ ಎಲ್ಲಾ ತಾಲ್ಲೂಕುಗಳಲ್ಲಿಯೂ ಕಾರ್ಯಾಲಯ ಪ್ರಾರಂಭವಾಗಲಿದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಆರ್.ವಿ. ನಿರೂಪ್ ಕುಮಾರ್, ಕುಕ್ಕಳಲೆ ಈಶ್ವರಪ್ಪಗೌಡ, ತಟಗೋಡು ಈಶ್ವರಪ್ಪಗೌಡ, ಕಾರಕ್ಕೀ ರಾಜುಗೌಡ, ರಂಜನ್ ಸೋನಲೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT