ರಿಪ್ಪನ್ ಪೇಟೆ : ಭಾರತೀಯ ಸಂಸ್ಕೃತಿ ಪರಂಪರೆಗೆ ಅನುಗುಣವಾಗಿ ಆಚಾರ ವಿಚಾರಗಳು ಆಚರಣೆಯಲ್ಲಿವೆ. ಪ್ರತಿ ಸಮುದಾಯದವೂ ತನ್ನದೇ ಆದ ವೃತ್ತಿ ಕೌಶಲ್ಯತೆ ಹೊಂದಿದೆ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಚಿಕ್ಕಜೇನಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಮೈತೆ ಗ್ರಾಮದಲ್ಲಿ ಭಾನುವಾರ ನಡೆದ ಕುಂಬಾರ ಸಂಘದ ಹೊಸನಗರ ತಾಲ್ಲೂಕು ಮಟ್ಟದ 19 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ಕುಂಬಾರ ಜನಾಂಗಕ್ಕೆ ಸೂಕ್ತ ಮಾರ್ಗದರ್ಶನವಿಲ್ಲ. ಕರಕುಶಲತೆಯಲ್ಲಿ ವಿಶೇಷ ನೈಪುಣ್ಯತೆ ಪಡೆದರೂ ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ವಿಫಲವಾಗಿದೆ. ಅದರಿಂದ ಹೊರಬರಲು ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಸಂಸ್ಕಾರಯುತ ಶಿಕ್ಷಣ ಕೊಡಿಸಿ ಸದೃಢ ಸಮಾಜ ಕಟ್ಟಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಮಾತನಾಡಿ, ಯುವ ಸಮುದಾಯ ಇಂತಹ ಸಂಘಟನಾತ್ಮಕ ಚಟುವಟಿಕೆ ಮೂಲಕ ಇತರ ಸಮಾಜಕ್ಕೆ ಮಾದರಿಯಾಗುವಂತಿರಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಕೆ.ಆರ್. ರವಿ ಮಾತನಾಡಿ ಮನಸ್ಸು ಕಟ್ಟುವ ಮೂಲಕ ಸಮಾಜ ಸಂಘಟನೆ ಮಾಡಬೇಕು. ಮೌಲ್ಯಯುತ ಚಿಂತನೆ, ಜ್ಞಾನ ಸಂಸ್ಕಾರ ಸಂಸ್ಕೃತಿ ಮಕ್ಕಳಿಗೆ ಕೊಡುವ ಮೂಲಕ ಸಮಾಜದ ಬೆಳವಣಿಗೆಗೆ ಶ್ರಮಿಸಿ ಎಂದರು.

ಹೊಸನಗರ ತಾಲ್ಲೂಕು ಕುಂಬಾರ ಸಂಘದ ಅಧ್ಯಕ್ಷ ಶೇಖರಪ್ಪ ಎಲ್.ಹಿಂಡ್ಲೆಮನೆ ಅಧ್ಯಕ್ಷತೆ ವಹಿಸಿದ್ದರು. ವಾರ್ಷಿಕ ಸಭೆಯ ಆಯೋಜನಾ ಸಮಿತಿ ಅಧ್ಯಕ್ಷ ಶೇಖರಪ್ಪ ಎಚ್.ಬಿ., ಹೊಸನಗರ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ಚಂದ್ರಮೌಳಿಗೌಡ, ತಾಲ್ಲೂಕು ಕುಂಬಾರ ಸಮಾಜದ ಗೌರವಾಧ್ಯಕ್ಷ ಸಳ್ಳಿ ಪುಟ್ಟಸ್ವಾಮಿ, ಚಿಕ್ಕಜೇನಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಎನ್.ಪಿ.ರಾಜು, ವೆಂಕಟಾಚಲ, ಭದ್ರಪ್ಪಗೌಡ, ಶಾರದಾ ಮಂಜಪ್ಪ, ಪಾರ್ವತಿ ಭದ್ರಪ್ಪ ಮಾತನಾಡಿದರು. ಸಮಾರಂಭಕ್ಕೂ ಮುನ್ನ ದುರ್ಗಾಪರಮೇಶ್ವರಿ ಅಮ್ಮನವರ ಪಲ್ಲಕ್ಕಿ ಉತ್ಸವ ಜರುಗಿತು.

ಎಸ್.ಎಸ್.ಎಲ್.ಸಿ.ಮತ್ತು ಪಿ.ಯು.ಸಿಯಲ್ಲಿ ಶೇ 75ಕ್ಕಿಂತ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೇ ವೇಳೆ ಪುರಸ್ಕಾರ ಹಾಗೂ ಸಮಾಜದ ಹಿರಿಯ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ವಿಜೇಂದ್ರ ಸ್ವಾಗತಿಸಿದರು, ರಮೇಶ ಎಸ್.ಹೊಸಳ್ಳಿ ನಿರೂಪಿಸಿ ವಂದಿಸಿದರು.

ಮುಖ್ಯವಾಹಿನಿಗೆ ತರುವ ಕೆಲಸ ಆಗಲಿ: ಹರತಾಳು

ರಿಪ್ಪನ್ ಪೇಟೆ: ‘ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನೂ ಗುರುತಿಸಿ ಮುಖ್ಯ ವಾಹಿನಿಗೆ ತರಬೇಕಾದ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಲಪ್ಪ ಹರತಾಳು ಹೇಳಿದರು.

ಹಿರೇಮೈತೆ ಗ್ರಾಮದಲ್ಲಿ ಭಾನುವಾರ ಅಯೋಜಿಸಿದ್ದ ಕುಂಬಾರರ ಸಂಘದ ಹೊಸನಗರ ತಾಲ್ಲೂಕು ಘಟಕದ 19ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಶಿಕ್ಷಣ ಆರ್ಥಿಕ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುತ್ತಿವೆ. ಆ ನಿಟ್ಟಿನಲ್ಲಿ ಭದ್ರತೆ ರಹಿತ ಸಾಲ ಸೌಲಭ್ಯ ಕಲ್ಪಿಸುತ್ತಿದೆ. ಇದರ ಪ್ರಯೋಜನ ಸಮುದಾಯದವರು ಪಡೆದುಕೊಂಡು ಸ್ವಾವಲಂಬಿ ಬದುಕು ನಡೆಸುವಂತೆ ಸಲಹೆ ನೀಡಿದರು. ಅಭಿವೃದ್ಧಿ ಹೊಂದುತ್ತಿರುವ ಭಾರತದಲ್ಲಿ ದುಡಿಮೆಗೆ ಹಲವಾರು ಮಾರ್ಗಗಳಿದ್ದು ಪ್ರತಿಯೊಬ್ಬರು ಆತ್ಮಸ್ಥೈರ್ಯದಿಂದ ಬದುಕು ನಡೆಸಬೇಕು. ಯಾವುದೇ ವೃತ್ತಿ ಕೀಳರಿಮೆ ಸಲ್ಲದು ಪ್ರತಿಯೊಂದು ವೃತ್ತಿಯು ಪೂಜ್ಯನೀಯ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.