ಶಿವಮೊಗ್ಗ: 'ಶಿಕ್ಷಣವು ಕೇವಲ ಪದವಿ ಪಡೆಯುವ ಸಾಧನವಲ್ಲ, ಅದು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ನಿಜವಾದ ಸಾರ್ಥಕತೆ ಪಡೆಯುತ್ತದೆ' ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ತಿಳಿಸಿದರು.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ 35ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು

ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

'ಸೋಲುಗಳು ಜೀವನದ ಭಾಗ, ಅವುಗಳಿಂದ ಕಲಿತು ಮುಂದೆ ಸಾಗುವುದೇ ನಿಜವಾದ ಯಶಸ್ಸು. ಕುವೆಂಪು ಅವರ 'ವಿಶ್ವಮಾನವ' ಆದರ್ಶ ಮತ್ತು ಮಾನವತಾವಾದ ನಿಮ್ಮ ಬದುಕಿಗೆ ದಾರಿದೀಪವಾಗಲಿ. ಇಂದಿನ ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಕ್ರಾಂತಿಯ ಯುಗದಲ್ಲಿ ನಿಮ್ಮ ಜ್ಞಾನವನ್ನು ನಿರಂತರವಾಗಿ ನವೀಕರಿಸಿಕೊಳ್ಳಿ. ಕೇವಲ ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ (Job Creators) ಬೆಳೆಯಿರಿ' ಎಂದು ಕಿವಿಮಾತು ಹೇಳಿದರು.

ಘಟಿಕೋತ್ಸವ ಭಾಷಣ ಮಾಡಿದ ರಾಷ್ಟ್ರೀಯ ಮಾನ್ಯತಾ ಮಂಡಳಿಯ ಅಧ್ಯಕ್ಷ ಪ್ರೊ. ಅನಿಲ್ ಡಿ. ಸಹಸ್ರಬುದ್ಧೆ ಮಾತ ಮಾತನಾಡಿ, 'ಇಂದಿನ ಜಗತ್ತು ಅತ್ಯಂತ ಸಂಕೀರ್ಣವಾಗಿದೆ. ಇಂತಹ ಅನಿಶ್ಚಿತತೆಯ ನಡುವೆಯೂ ಭಾರತವು ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದೆ. ನಾವೀನ್ಯತೆ ಸೂಚ್ಯಂಕದಲ್ಲಿ ಭಾರತವು 81ನೇ ಸ್ಥಾನದಿಂದ 38ನೇ ಸ್ಥಾನಕ್ಕೆ ಜಿಗಿದಿರುವುದು ಹೆಮ್ಮೆಯ ವಿಷಯ. ವಿದ್ಯಾರ್ಥಿಗಳು 'ಸತ್ಯಂ ವದ, ಧರ್ಮಂ ಚರ' ಎಂಬ ತತ್ವದೊಂದಿಗೆ ಜೀವನಪರ್ಯಂತ ಕಲಿಕೆಯನ್ನು ಮೈಗೂಡಿಸಿಕೊಳ್ಳಬೇಕು," ಎಂದರು.

ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಮಾತನಾಡಿ, 'ಪ್ರಸ್ತುತ ಎಂಜಿನಿಯರಿಂಗ್ ಪದವೀಧರರಲ್ಲಿ ಕೇವಲ 17% ರಷ್ಟು ಮಾತ್ರ ಉದ್ಯೋಗ ಲಭಿಸುತ್ತಿರುವುದು ಕಳವಳಕಾರಿ. ಈ ಹಿನ್ನೆಲೆಯಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಮತ್ತು ಉದ್ಯೋಗ ಮಾರುಕಟ್ಟೆಗೆ ಪೂರಕವಾಗಿ ಪಠ್ಯಕ್ರಮ ಬದಲಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ಸಹಯೋಗದಲ್ಲಿ 40 ಕಾಲೇಜುಗಳನ್ನು ಮಾದರಿ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು' ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ವರದಿ ವಾಚಿಸಿದರು. ವೇದಿಕೆಯಲ್ಲಿ ಕುಲಸಚಿವ ಹೇಮಂತ್ ಎನ್., ಮೌಲ್ಯಮಾಪನ ಕುಲಸಚಿವ ಪ್ರೊ. ಆರ್. ತಿಮ್ಮರಾಯಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.