ಶಿರಾಳಕೊಪ್ಪ: ಪಟ್ಟಣದ ಸೊರಬ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗಕ್ಕೆ ಶನಿವಾರ ದಿಢೀರ್ ಭೇಟಿ ನೀಡಿ ಮಾತನಾಡಿದ ಅವರು.

‘ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ ಪ್ರೌಢ ಶಾಲೆಗೆ ನಾನು ಶಿಕ್ಷಣ ಸಚಿವನಾಗಿ ಆಗಮಿಸುತ್ತಿರುವುದು ನನ್ನ ಪೂರ್ವಜನ್ಮದ ಪುಣ್ಯವಾಗಿದೆ. ಸರ್ಕಾರಿ ಶಾಲೆಯಲ್ಲಿ ಅತ್ಯುತ್ತಮ ಶಿಕ್ಷಣ ಲಭಿಸುತ್ತಿದೆ. ಪ್ರತಿಭಾವಂತ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದು ಹೇಳಿದರು.

‘ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಹಲವಾರು ಸಾಧಕರು ಸರ್ಕಾರಿ ಶಾಲೆಯಲ್ಲಿ ಓದಿದ್ದಾರೆ ಎನ್ನುವುದು ನಾಡಿನ ಹೆಮ್ಮೆಯಾಗಿದೆ. ಪಟ್ಟಣದಲ್ಲಿ ಈಗಾಗಲೇ ಬಾಲಕಿಯರ ಕರ್ನಾಟಕ ಪಬ್ಲಿಕ್ ಶಾಲೆ ಇದ್ದು, ಎರಡು ಶಾಲೆ ಸೇರಿಸಿ ಒಂದು ಮಾಡುವುದೋ ಅಥವಾ ಮತ್ತೊಂದು ಪ್ರತ್ಯೇಕವಾಗಿ ಮಾಡುವುದೋ ಎನ್ನುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಸಲಹೆ ಪಡೆದು ನಿರ್ಧರಿಸಲಾಗುವುದು. ಜನವರಿ ಒಳಗೆ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಭೂಮಿಪೂಜೆ ಮಾಡಲಾಗುವುದು’ ಎಂದು ತಿಳಿಸಿದರು.

ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ್ ಗೌಡ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಪುರಸಭೆ ಅಧ್ಯಕ್ಷೆ ಮಮತಾ ನಿಂಗಪ್ಪ, ಉಪಾಧ್ಯಕ್ಷ ಮುದಾಸೀರ್, ಸದಸ್ಯರಾದ ಎಂ.ಆರ್.ರಾಘವೇಂದ್ರ, ನಿರ್ಮಲಾ, ಮಹಾಬಲ, ಮಾಜಿ ಸದಸ್ಯರಾದ ಐ.ಎಂ.ಶಿವಾನಂದ ಸ್ವಾಮಿ, ಟೌನ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಬಿಲಾಲ್, ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ವೀರನ ಗೌಡ, ಬಗರಹುಕುಂ ಸಮಿತಿ ಸದಸ್ಯ ಸುನೀಲ್, ತಡಗಣಿ ಗ್ರಾಮದ ತೇಜಪ್ಪ, ಹೊಳಿಯಪ್ಪ, ಮಿತ್ರೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.