ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ ಪ್ರಕರಣ: ಗ್ರಾ.ಪಂ. ಅಧ್ಯಕ್ಷೆ ಎಸಿಬಿ ಬಲೆಗೆ

Last Updated 23 ಅಕ್ಟೋಬರ್ 2021, 6:25 IST
ಅಕ್ಷರ ಗಾತ್ರ

ಶಿವಮೊಗ್ಗ: ಕಾಮಗಾರಿಯ ಮೊತ್ತವನ್ನು ಮಂಜೂರು ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೇಣಿ ಕಣ್ಣನ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಮುದ್ದಿನಕೊಪ್ಪ ಗ್ರಾಮದ ನಿವಾಸಿಯೊಬ್ಬರು ಗುತ್ತಿಗೆದಾರರೊಬ್ಬರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು ಪೂರ್ಣಗೊಳಿಸಿದ್ದರು. 2020ರ ಜನವರಿಯಲ್ಲೇ ಕಾಮಗಾರಿ ಮುಕ್ತಾಯವಾಗಿತ್ತು. ಕಾಮಗಾರಿ ಮೊತ್ತವನ್ನು ಮಂಜೂರು ಮಾಡಿಕೊಡಲು ₹ 50 ಸಾವಿರ ಕೊಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೇಣಿ ಕಣ್ಣನ್ ಬೇಡಿಕೆ ಇಟ್ಟಿದ್ದರು. ಶುಕ್ರವಾರ ₹ 25 ಸಾವಿರ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT