ಮಂಗಳವಾರ, ಜೂನ್ 28, 2022
26 °C
ನರೇಗಾ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಗ್ರಾ.ಪಂ. ಅಧಿಕಾರ ಮೊಟಕು

ಅರೆಬೆತ್ತಲೆಯಾಗಿ ಕಸಗುಡಿಸಿ ಪ್ರತಿಭಟಿಸಿದ ಗ್ರಾ.ಪಂ. ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸನಗರ: ನರೇಗಾ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಗ್ರಾಮ ಪಂಚಾಯಿತಿ ಅಧಿಕಾರವನ್ನು ಕಸಿದುಕೊಂಡ ತೋಟಗಾರಿಕಾ ಇಲಾಖಾ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಮೂಡುಗೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ ಅವರು ಅರೆಬೆತ್ತೆಲೆಯಾಗಿ ತಾಲ್ಲೂಕು ಪಂಚಾಯಿತಿ ಕಚೇರಿ ಗುಡಿಸುವ ಮೂಲಕ ಪ್ರತಿಭಟನೆ ದಾಖಲಿಸಿದರು.

‘ನರೇಗಾ ಯೋಜನೆಯಡಿ ಗ್ರಾಮಸಭೆಯಲ್ಲಿ ನಿರ್ಣಯಗೊಂಡ ಫಲಾನುಭವಿಗಳಿಗೆ ಅಡಕೆ ಗಿಡ ನೆಡಲು ಅನುದಾನ ನೀಡುವ ಅಧಿಕಾರ ಗ್ರಾಮ ಪಂಚಾಯಿತಿಗಳಿಗಿ. ಆದರೆ, ಗ್ರಾಮ ಪಂಚಾಯಿತಿಗೆ ಯಾವುದೇ ಮಾಹಿತಿ ನೀಡದ ತೋಟಗಾರಿಕಾ ಇಲಾಖಾ ಅಧಿಕಾರಿಗಳು ಲಂಚ ಪಡೆದು ಫಲಾನುಭವಿಗಳನ್ನು ಗುರುತಿಸಿ, ಪಟ್ಟಿಯನ್ನು ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಕಳುಹಿಸಿ ಮಂಜೂರು ಪಡೆದಿದ್ದಾರೆ’ ಎಂದು ದೂರಿದರು.

‘ಗ್ರಾಮ ಪಂಚಾಯಿತಿಗಿರುವ ಪರಮಾಧಿಕಾರಿ ಕಸಿದುಕೊಂಡು, ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳ ಸಹಿಯನ್ನು ಪಡೆಯದೇ ಅಕ್ರಮವಾಗಿ ಪಟ್ಟಿ ತಯಾರಿಸಲಾಗಿದೆ. ನಮ್ಮ ಕೆಲಸವನ್ನು ತಾಲ್ಲೂಕು ಪಂಚಾಯಿತಿ ಇಒ ಮತ್ತು ಇತರೆ ಅಧಿಕಾರಿಗಳು ನಿರ್ವಹಿಸಿದ ಕಾರಣ ತಾಲ್ಲೂಕು ಪಂಚಾಯಿತಿ ಕಚೇರಿಗೆ ತೆರಳಿ ಕಸಗುಡಿಸುವ ಮೂಲಕ ಪ್ರತಿಭಟಿಸಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರಶೆಟ್ಟಿ ತಿಳಿಸಿದ್ದಾರೆ.

‘ಜಿಲ್ಲಾ ಪಂಚಾಯಿತಿ ಸಿಇಒ ಅವರು ಈ ಬಗ್ಗೆ ಕೂಡಲೇ ಗಮನಹರಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು