ಭದ್ರಾವತಿ: ನಗರದ ಪ್ರಮುಖ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಭಕ್ತರು ಬೆಳಿಗ್ಗೆಯಿಂದ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು.

ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ, ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬೆಳಿಗ್ಗೆ 4.30ಕ್ಕೆ ಪ್ರಾಕಾರ ಉತ್ಸವ, ಪರಮಪದ ಮಹಾದ್ವಾರದ ಪೂಜೆ ನೆರವೇರಿತು. ವೈಕುಂಠನಾಥನ ದರ್ಶನದ ನಂತರ ಗೋದಾದೇವಿ ಉತ್ಸವದೊಂದಿಗೆ ವಿವಿಧ ಭಜನಾ ಮಂಡಳಿಯವರಿಂದ ಸಂಕೀರ್ತನೆ ಹಾಗೂ ಕೃಷ್ಣ ಗೆಳೆಯರ ಬಳಗದಿಂದ ಚಂಡೇವಾದ್ಯ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಎಸ್, ರಂಗನಾಥಶರ್ಮ ಹಾಗೂ ಸಹಾಯಕ ಅರ್ಚಕ ಎಸ್. ಶ್ರೀನಿವಾಸನ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಿ. ರಮಾಕಾಂತ, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು..

ತಿರುಮಲ ವೆಂಕಟೇಶ್ವರಸ್ವಾಮಿ ದೇವಸ್ಥಾನ :

ನಗರಸಭೆ ವಾಡ್ ನಂ.2ರ ವ್ಯಾಪ್ತಿಯ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ವೈಭವಯುತವಾಗಿ ವೈಕುಂಠ ಏಕಾದಶಿ ಜರುಗಿತು.

ಬೆಳಿಗ್ಗೆ 4 ಗಂಟೆಗೆ ಲಕ್ಷ ಪುಷ್ಪಾರ್ಚನೆ, ವಿಷ್ಣು ಸಹಸ್ರನಾಮ ಮತ್ತು ದೇವರ ಉತ್ಸವ, 6.30ಕ್ಕೆ ಮಹಾಮಂಗಳಾರತಿ, 6.45 ರಿಂದ ವೈಕುಂಠ ದೇವರ ದರ್ಶನ ನಡೆಯಿತು. ಪಾಸ್ ಮೂಲಕ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ದೇವಸ್ಥಾನ ಆಡಳಿತ ಮಂಡಳಿಯಿಂದ ಭಕ್ತರಿಗೆ ಲಾಡು ಹಾಗೂ ಹಾಲು ಪ್ರಸಾದ ವಿತರಣೆ ವ್ಯವಸ್ಥೆ ಕೈಗೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.