ಮಂಗಳವಾರ, ಜೂಲೈ 7, 2020
28 °C

ಭೂಗರ್ಭ ಜಲ ವಿದ್ಯುತ್ ಯೋಜನೆಗೆ ಅವಕಾಶ ನೀಡಲ್ಲ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಶರಾವತಿ ಭೂಗರ್ಭ ಜಲ ವಿದ್ಯುತ್ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದರು.

‘ಯಾರೋ ವಿಮಾನದಲ್ಲಿ ಬಂದು ಜಾಗ ನೋಡಿಕೊಂಡು ಹೋಗಿದ್ದಾರೆ, ಯೋಜನೆ ಅಭಿವೃದ್ಧಿಗೆ ಸರ್ವೆ ಕಾರ್ಯ ನಡೆಸುತ್ತಿದ್ದಾರೆ ಎಂಬುದು ಸುಳ್ಳು. ಯೋಜನೆ ಅನುಷ್ಠಾನ ಕುರಿತು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಅದಕ್ಕೆ ನಮ್ಮ ಬೆಂಬಲವೂ ಇಲ್ಲ’ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಹರಿಸಲು ಯೋಜನೆ ರೂಪಿಸಿದವರು ಯಾರೋ ನನಗೆ ಗೊತ್ತಿಲ್ಲ. ಯಾವುದೇ ಕಾರಣಕ್ಕೂ ಇಲ್ಲಿಯ ನೀರನ್ನು ಬೆಂಗಳೂರಿಗೆ ಹರಿಯಲು ಬಿಡುವುದಿಲ್ಲ. ಬೆಂಗಳೂರಿಗೆ ನೀರು ತೆಗೆದುಕೊಂಡು ಹೋಗುವುದು ತಮಾಷೆಯ ಮಾತಲ್ಲ. ಲಿಂಗನಮಕ್ಕಿ ಅಣೆಕಟ್ಟೆ ನಿರ್ಮಾಣದ ಸಮಯದಲ್ಲಿ ಆದ ಮುಳುಗಡೆ ಸಂತ್ರಸ್ತರ ಪುನರ್ವಸತಿ‌ ಸಮಸ್ಯೆಗಳಿಗೇ ಇನ್ನೂ ಪರಿಹಾರ ದೊರೆತಿಲ್ಲ. ಹೀಗಾಗಿ ಹೊಸ ಯೋಜನೆಗಳು ಕಾರ್ಯಸಾಧುವೂ ಅಲ್ಲ’ ಎಂದು ಅಭಿಪ್ರಾಯಪಟ್ಟರು.

ತಲಕಾವೇರಿಯನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲಿ ಶರಾವತಿ ಉಗಮ ಸ್ಥಾನ ಅಂಬುತೀರ್ಥವನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು