ಸಾಗರ: ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ರಾಜ್ಯ ಈಡಿಗರ ಸಮ್ಮೇಳನದಲ್ಲಿ ಬಿಜೆಪಿಯ ಈಡಿಗ ಮುಖಂಡರು ಕೂಡ ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಈಡಿಗ ಸಮುದಾಯದ ಇಬ್ಬರಿಗೆ (ಘಟ್ಟದ ಮೇಲಿನ ಒಬ್ಬರಿಗೆ, ಘಟ್ಟದ ಕೆಳಗಿನ ಒಬ್ಬರಿಗೆ) ಸಚಿವ ಸ್ಥಾನ ನೀಡಲಾಗಿತ್ತು. ಅದೇ ಮಾದರಿಯಲ್ಲಿ ಕಾಂಗ್ರೆಸ್ ಸರ್ಕಾರ ಈಡಿಗ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವಿಧಾನಸಭೆಯಿಂದ ಘಟ್ಟದ ಮೇಲಿನವರಾದ ಈಡಿಗ ಸಮುದಾಯದ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ವಿಧಾನ ಪರಿಷತ್ ನಿಂದ ಈಡಿಗ ಸಮುದಾಯದ ಮತ್ತೊಬ್ಬರಿಗೆ (ಘಟ್ಟದ ಕೆಳಗಿನವರಿಗೆ) ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.