ಶಿಕ್ಷಣದಲ್ಲಿ ಯೋಗ ಅಳವಡಿಸುವತ್ತ ಚಿಂತನೆ ಅಗತ್ಯ: ಹಾಲಪ್ಪ ಹರತಾಳು

ಸಾಗರ: ಶಿಕ್ಷಣ ಕ್ರಮದಲ್ಲಿ ಯೋಗಾಸನವನ್ನು ಅಳವಡಿಸುವತ್ತ ಚಿಂತನೆ ನಡೆಸುವ ಅಗತ್ಯವಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.
ಇಲ್ಲಿನ ವನಶ್ರೀ ವಿದ್ಯಾಸಂಸ್ಥೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ವನಶ್ರೀ ಜಲಯೋಗ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ, ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಥಮಿಕ ಶಿಕ್ಷಣ ಹಂತದಿಂದಲೆ ಮಕ್ಕಳು ಯೋಗಾಸನದ ಅಭ್ಯಾಸದಲ್ಲಿ ತೊಡಗುವುದರಿಂದ ಅವರ ಮಾನಸಿಕ, ದೈಹಿಕ ಆರೋಗ್ಯದಲ್ಲಿ ಸದೃಢತೆ ಕಾಣಬಹುದು. ಅಲ್ಲದೆ ಮಕ್ಕಳಲ್ಲಿ ಯೋಗದ ಅಭ್ಯಾಸದಿಂದ ಏಕಾಗ್ರತೆ ಲಭ್ಯವಾಗುತ್ತದೆ ಎಂದು ಹೇಳಿದರು.
ವನಶ್ರೀ ಶಿಕ್ಷಣ ಸಂಸ್ಥೆ ತನ್ನ ಆರಂಭದ ದಿನದಿಂದಲೂ ಯೋಗಾಸನಕ್ಕೆ, ಗುರುಕುಲ ಮಾದರಿಯ ಶಿಕ್ಷಣಕ್ಕೆ ಒತ್ತು ನೀಡುತ್ತ ಬಂದಿರುವುದು ಗಮನಿಸಬೇಕಾದ ಸಂಗತಿ. ಇಲ್ಲಿ ಹೊರರಾಜ್ಯದ ಮಕ್ಕಳು ಕೂಡ ಓದುತ್ತಿದ್ದಾರೆ. ಇಂತಹ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಹಾಗೂ ದಾನಿಗಳ ನೆರವಿನ ಅಗತ್ಯವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವನಶ್ರೀ ಸಂಸ್ಥಾಪಕ ಎಚ್.ಪಿ. ಮಂಜಪ್ಪ, ನಮ್ಮ ಸಂಸ್ಥೆಯಲ್ಲಿ ಈವರೆಗೆ ಯೋಗಾಸನವು ಶಿಕ್ಷಣದ ಒಂದು ಭಾಗವಾಗಿದ್ದು, ಇದೀಗ ಜಲಯೋಗ ಕೇಂದ್ರವನ್ನು ಕೂಡ ಆರಂಭಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಹೊಸಗುಂದ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಸಂಸ್ಥಾಪಕ ಸಿ.ಎಂ.ಎನ್. ಶಾಸ್ತ್ರಿ, ನಗರಸಭೆ ಸದಸ್ಯ ಟಿ.ಡಿ. ಮೇಘರಾಜ್, ಯಡಜಿಗಳಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಹಕ್ರೆ, ಜಲಯೋಗ ತಜ್ಞ ಹರೀಶ್ ನವಾಥೆ, ಮಂಜು ನಾಯ್ಕ್, ತೇಜಸ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.