ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧನೆಯಲ್ಲೂ ವೈವಿಧ್ಯತೆ ಸಾಗರದ ವಿಶೇಷ: ಹಾಲಪ್ಪ ಹರತಾಳು

Last Updated 28 ಜನವರಿ 2023, 6:40 IST
ಅಕ್ಷರ ಗಾತ್ರ

ಸಾಗರ: ಸಾಧನೆಯಲ್ಲೂ ವೈವಿಧ್ಯತೆಯನ್ನು ಹೊಂದಿರುವುದು ಸಾಗರದ ವಿಶೇಷತೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.

ಇಲ್ಲಿನ ಗಾಂಧಿ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ತಾಲ್ಲೂಕು ಆಡಳಿತ ಗುರುವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸಾಗರ ಒಂದು ತಾಲ್ಲೂಕು ಕೇಂದ್ರವಾದರೂ ಇಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ ಮೊದಲಾದ ಕ್ಷೇತ್ರಗಳಲ್ಲಿ ರಾಷ್ಟ್ರಮಟ್ಟದಲ್ಲೂ ಉತ್ತಮ ಹೆಸರು ಮಾಡಿರುವ ಕಲಾವಿದರು ಇದ್ದಾರೆ. ಇಂತಹ ಸಾಧಕರ ಸಾಧನೆ ಯುವ ತಲೆಮಾರಿಗೆ ಸ್ಫೂರ್ತಿಯಾಗಬೇಕು ಎಂದರು.

ಅ.ರಾ.ಶ್ರೀನಿವಾಸ್ (ಪತ್ರಿಕಾ ರಂಗ), ಡಾ.ಎಚ್.ಎಸ್.ಮೋಹನ್ (ವೈದ್ಯಕೀಯ ಕ್ಷೇತ್ರ), ಎಂ.ನಾಗರಾಜ್ (ಪೌರ ಕಾರ್ಮಿಕ). ಶಾಂತಲಾ ಸುರೇಶ್ (ಶಿಕ್ಷಣ), ಸತ್ಯನಾರಾಯಣ (ಸಾಹಿತ್ಯ), ಗಗನ ಎಂ. (ಬಾಲ ಪ್ರತಿಭೆ) ಅವರನ್ನು ಸನ್ಮಾನಿಸಲಾಯಿತು.

ಮತದಾರರ ನೋಂದಣಿಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಪ್ರಶಸ್ತಿ ಪಡೆದಿರುವ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರನ್ನು ಅಭಿನಂದಿಸಲಾಯಿತು.

ಮದನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಗುರುರಾಜ್, ಮಹೇಶ್, ವಿ.ಟಿ.ಸ್ವಾಮಿ ಇದ್ದರು.

ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT