ಸಾಗರ: ಮಲೆನಾಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ನಡುವೆ ಇರುವ ರಸ್ತೆ ಪ್ರಯಾಣದ ಅಂತರವನ್ನು ಕಡಿಮೆ ಮಾಡುವ ಹಸಿರುಮಕ್ಕಿ ಸೇತುವೆ ನಿರ್ಮಾಣ ಕಾಮಗಾರಿಯು ಅತ್ಯಂತ ಭರದಿಂದ ಸಾಗಿದೆ. ಕಾಮಗಾರಿ ವೀಕ್ಷಣೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶೀಘ್ರದಲ್ಲೇ ಆಗಮಿಸಲಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ತಾಲ್ಲೂಕಿನ ಹುಲಿದೇವರಬನದಿಂದ ಹಸಿರುಮಕ್ಕಿವರೆಗಿನ ₹ 95 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಈಚೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಹಸಿರುಮಕ್ಕಿ ಸೇತುವೆ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಲಾಗುವುದು ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಹಸಿರುಮಕ್ಕಿ ಸೇತುವೆ ನಿರ್ಮಾಣಕ್ಕೆ ತಾಂತ್ರಿಕ ಸಮಸ್ಯೆಯ ನೆಪ ಹೇಳಿ ಕಾಮಗಾರಿಯ ವೇಗ ಕುಂಠಿತಗೊಳ್ಳುವಂತೆ ಮಾಡಿತ್ತು. ಸಿಗಂದೂರು ಸೇತುವೆ ನಿರ್ಮಾಣಕ್ಕೆ ತೋರಿದ ಉತ್ಸಾಹವನ್ನು ಹಸಿರುಮಕ್ಕಿ ಸೇತುವೆ ವಿಷಯದಲ್ಲಿ ತೋರಿಸಲಾಗಿಲ್ಲ ಎಂದು ದೂರಿದರು.

ಕೆ.ಬಿ.ಸರ್ಕಲ್ ಹಾಗೂ ಪಟಗುಪ್ಪೆ ರಸ್ತೆ ಸೇರಿ ಸುತ್ತಮುತ್ತಲ ಪ್ರದೇಶದಲ್ಲಿ ₹7.50 ಕೋಟಿ ವೆಚ್ಚದಲ್ಲಿ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. 232 ಕಾಲುಸಂಕ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ. ಆವಿನಹಳ್ಳಿ ವಸತಿ ಶಾಲೆ ನಿರ್ಮಾಣಕ್ಕೆ ₹17 ಕೋಟಿ ಮಂಜೂರಾಗಿದೆ. ಆದಾಗ್ಯೂ ಬಿಜೆಪಿ ಮುಖಂಡರು ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದೆ ಎಂದು ಟೀಕಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.

ಆಪ್ಸ್ ಕೋಸ್ ಅಧ್ಯಕ್ಷ ಬಿ.ಎ.ಇಂದೂಧರ, ಕೋಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಗೌಡ ಜಿ.ವಿ. ಪ್ರಮುಖರಾದ ರವಿಕುಮಾರ್ ಎಚ್.ಎಂ. ಈಶ್ವರಪ್ಪ, ಮಂಜಪ್ಪ ಗೌಡ, ಸುಮಿತ್ರ ಗಣೇಶ್, ಆಶಾ ಕೋಳೂರು, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಉಮೇಶ್ ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.