ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮ ಜಾಗೃತಿಯೊಂದಿಗೆ ನಂಬಿಕೆ ಇರಲಿ

ಕೋಣಂದೂರು ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
Last Updated 2 ಜನವರಿ 2022, 5:13 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಮಹಿಳೆಯರಿಗೆ ಸಹಕಾರ ಮನೋಭಾವದಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರೇರಣೆ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಯೋಜನಾ ಬದ್ಧ ಕಾರ್ಯವೈಖರಿ ಸಮಾಜಕ್ಕೆ ಮಾದರಿ ಎಂದು ಕೋಣಂದೂರು ಬೃಹನ್ಮಠದ ಪೀಠಾಧಿಕಾರಿ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳೇಶ್ವರ ಗಂಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಹೊಸನಗರ ತಾಲ್ಲೂಕು ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಹಾಗೂ ರಿಪ್ಪನ್‌ಪೇಟೆ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸಾಮೂಹಿಕ ಗಣಹೋಮ ಮತ್ತು ಸುಮಂಗಲಿ ಪೂಜಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಧರ್ಮ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಧರ್ಮ ಜಾಗೃತಿಯೊಂದಿಗೆ ನಂಬಿಕೆಗೆ ಪ್ರಾಮುಖ್ಯತೆ ಕೊಡಬೇಕು. ಪರಸ್ಪರ ಸಹಕಾರ ಮನೋಭಾವ ಇರಬೇಕು ಎಂದು ಸಲಹೆ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಗೀತಾ ಮಾತನಾಡಿ, ‘ಬಾಲ್ಯದಲ್ಲಿಯೇ ಮಕ್ಕಳಲ್ಲಿ ಭಜನೆ, ಧಾರ್ಮಿಕ ಕಾರ್ಯದಲ್ಲಿ ತೊಡಗಲು ಪ್ರೇರೇಪಿಸಬೇಕು’ ಎಂದು ಸಲಹೆ ನೀಡಿದರು.

ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಅಧ್ಯಕ್ಷತೆ ವಹಿಸಿದ್ದರು.ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಎಸ್‌. ಮಂಜುನಾಥ, ಕಾಳೇಶ್ವರ ಮಂಜಪ್ಪ ಇದ್ದರು.

ಮೇಲ್ವಿಚಾರಕ ಹರೀಶ್‌ ಕುಮಾರ್‌ ಸ್ವಾಗತಿಸಿದರು. ನಾಗೇಶ್‌ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT