ಶಿಕಾರಿಪುರ: ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಯನ್ನು ಶೀಘ್ರವಾಗಿ ಆರಂಭಿಸಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಕೆಎಚ್‌ಬಿ ಬಡಾವಣೆಯಲ್ಲಿ ನೂತನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ಹಂತದ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಆಸ್ಪತ್ರೆಗಳಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ವೈದ್ಯಾಧಿಕಾರಿಗಳು ಗಮನ ಹರಿಸಬೇಕು. ನೂರು ಹಾಸಿಗೆಯುಳ್ಳ ಸುಸಜ್ಜಿತ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಹೆಚ್ಚಿನ ಆದ್ಯತೆ ನೀಡಿದ್ದಾರೆ. ಆಸ್ಪತ್ರೆಗೆ ಅಗತ್ಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ನೇಮಿಸಿಕೊಂಡು ಶೀಘ್ರದಲ್ಲಿ ಆರೋಗ್ಯ ಸೇವೆ ಆರಂಭಿಸಿಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮುಖ್ಯಸ್ಥ ಡಾ.ರಾಜ್ ಕುಮಾರ್, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಶಿವಾನಂದ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮುಖಂಡರಾದ ಎಂ.ಬಿ. ಚನ್ನವೀರಪ್ಪ, ಮಲ್ಲೇಶಪ್ಪ, ಎಸ್.ಎಸ್. ರಾಘವೇಂದ್ರ, ನಾಗೀಹಳ್ಳಿ ಗಣೇಶ್, ಬೆಣ್ಣೆ ಪ್ರವೀಣ್, ರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.