ಗುರುವಾರ , ಸೆಪ್ಟೆಂಬರ್ 24, 2020
24 °C

ಹೃದಯಾಘಾತ: ಮೌಲ್ಯಮಾಪನ ಕೇಂದ್ರದಲ್ಲೇ ಶಿಕ್ಷಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ–ಪ್ರಾತಿನಿಧಿಕ ಚಿತ್ರ

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ತೊಡಗಿದ್ದ ಶಿಕ್ಷಕರೊಬ್ಬರು ಬುಧವಾರ ಮೃತಪಟ್ಟಿದ್ದಾರೆ.

ಭದ್ರಾವತಿ ನ್ಯೂಟೌನ್‌ ಈಶ್ವರಮ್ಮ ಪ್ರೌಢಶಾಲೆಯ ಎನ್‌.ಎಂ.ಕುಮಾರ್ (48) ಮೃತಪಟ್ಟವರು.

ಬಾಲರಾಜ ಅರಸು ರಸ್ತೆಯ ನ್ಯಾಷನಲ್‌  ಬಾಲಕರ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆಯ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಮಧ್ಯಾಹ್ನ ಊಟದ ಸಮಯದಲ್ಲಿ ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಮೌಲ್ಯಮಾಪನ ಕೇಂದ್ರದಲ್ಲಿದ್ದ ಸಹೋದ್ಯೋಗಿಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಖಾಸಗಿ ಅನುದಾನ ರಹಿತ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಅವರು ಆರ್ಥಿಕ ಸಂಕಷ್ಟದಲ್ಲಿದ್ದರು. ಅವರ ಸಾವು ಕುಟುಂಬಕ್ಕೆ ಭರಿಸಲಾರದ ನಷ್ಟ. ಸರ್ಕಾರ ನೆರವು ನೀಡಬೇಕು ಎಂದು ಜಿಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಪ್ಪ ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು