ರಿಪ್ಪನ್ಪೇಟೆ: ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದ್ದರಿಂದ, ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ಆಯನೂರು ಬಳಿ ನಡೆದಿದೆ.

ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ (54) ಮೃತರು.

ಕೆಲಸದ ನಿಮಿತ್ತ ರಿಪ್ಪನ್ಪೇಟೆಯಿಂದ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಕಾರಿನಲ್ಲಿ ಅವರು ತೆರಳುತ್ತಿದ್ದರು. ಮಾರ್ಗಮಧ್ಯೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದರು ಎನ್ನಲಾಗಿದೆ. ಜೊತೆಗಿದ್ದವರು ತಕ್ಷಣ ಅವರನ್ನು ಬೇರೊಂದು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದರು. ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದರು ಎಂದು ತಿಳಿದುಬಂದಿದೆ.

ಭದ್ರಾವತಿ ವರದಿ: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ‘ಡಿ’ ದರ್ಜೆ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ನಗರದ ಬೊಮ್ಮನಕಟ್ಟೆ ನಿವಾಸಿ ನಂಜುಂಡಸ್ವಾಮಿ (59) ಮೃತರು. ಇವರಿಗೆ ಹೃದಯದ ಸಮಸ್ಯೆ ಇತ್ತು ಎನ್ನಲಾಗಿದೆ.

ಇವರು ರಾಜ್ಯ ಸರ್ಕಾರಿ ‘ಡಿ’ ದರ್ಜೆ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.