ತೀರ್ಥಹಳ್ಳಿ: ಅಕಾಲಿಕ ಮಳೆಯಿಂದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾರ್ಮಿಕರೊಬ್ಬರು ಗುರುವಾರ ಮೃತಪಟ್ಟಿದ್ದಾರೆ.

ಮೇಲಿನ ತೂದೂರಿನ ಶಂಕರಪ್ಪ (52) ಮೃತ ವ್ಯಕ್ತಿ. ಮಳೆಯಿಂದಾದ ಅನಾಹುತ ತಡೆಯಲು ಕೃಷಿ ಭೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮನೆಗೆ ತೆರಳುವ ಧಾವಂತದಲ್ಲಿದ್ದ ಶಂಕರಪ್ಪ ಗದ್ದೆ ಅಂಚಿನಿಂದ ಕಾಲು ಜಾರಿ ಹಳ್ಳಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಕೃಷಿ ಜಮೀನಿನಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಶಂಕರಪ್ಪ ಕುಟುಂಬದ ಆಧಾರ ಸ್ತಂಭವಾಗಿದ್ದರು. ಅವರಿಗೆ ಪತ್ನಿ, 8ನೇ ತರಗತಿ ಓದುತ್ತಿರುವ ಪುತ್ರ ಇದ್ದಾರೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಡಾ.ಶ್ರೀಪಾದ್, ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್ ಹೆಗ್ಡೆ, ರಾಜಸ್ವ ನಿರೀಕ್ಷಕ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿಪರಿಶೀಲಿಸಿದರು. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.