ಸಾಗರ: ಅಕಾಲಿಕ ಮಳೆಯಿಂದಾಗಿ ತಾಲ್ಲೂಕಿನಲ್ಲಿ 26 ಮನೆ, 6 ಕೊಟ್ಟಿಗೆ ಮನೆಗಳಿಗೆ ಹಾನಿ ಉಂಟಾಗಿದೆ. 4 ಮನೆಗಳು ಕುಸಿದು ಬಿದ್ದಿವೆ. 6 ಜಾನುವಾರು ಮೃತಪಟ್ಟಿವೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಮಾಹಿತಿ ನೀಡಿದ್ದಾರೆ.

ತಾಲ್ಲೂಕಿನ ವಿವಿಧೆಡೆ ಅಕಾಲಿಕ ಮಳೆಯಿಂದ ಹಾನಿ ಸಂಭವಿಸಿರುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ನಷ್ಟದ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನೆರೆ ಹಾನಿಯಿಂದ ತೊಂದರೆಗೊಳಗಾದವರಿಗೆ ತಾಲ್ಲೂಕು ಆಡಳಿತದಿಂದ ಸಹಾಯ ನೀಡಲು ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ತುರ್ತು ನೆರವಿನ ಅಗತ್ಯವಿರುವವರು 08183-226074 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

ನಗರದ ಹೊರವಲಯದಲ್ಲಿರುವ ಬಸವನ ಹೊಳೆ ಡ್ಯಾಂ ಭರ್ತಿಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯಾಂನಿಂದ ಅಲ್ಪಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ವಿಪತ್ತು ನಿರ್ವಹಣೆಗಾಗಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ ಎಂದು ಅವರು ಹೇಳಿದರು.

ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸದಸ್ಯರಾದ ಟಿ.ಡಿ. ಮೇಘರಾಜ್, ಕೆ.ಆರ್. ಗಣೇಶ್ ಪ್ರಸಾದ್, ಪೌರಾಯುಕ್ತ ರಾಜು ಡಿ. ಬಣಕಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಚ್.ಕೆ. ನಾಗಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.