ಮಂಗಳವಾರ, ಜೂನ್ 28, 2022
21 °C

ತೀರ್ಥಹಳ್ಳಿ: ಅಕಾಲಿಕ ಮಳೆ, ಕೃಷಿ ಕಾರ್ಮಿಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ: ಅಕಾಲಿಕ ಮಳೆಯಿಂದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾರ್ಮಿಕರೊಬ್ಬರು ಗುರುವಾರ ಮೃತಪಟ್ಟಿದ್ದಾರೆ.

ಮೇಲಿನ ತೂದೂರಿನ ಶಂಕರಪ್ಪ (52) ಮೃತ ವ್ಯಕ್ತಿ. ಮಳೆಯಿಂದಾದ ಅನಾಹುತ ತಡೆಯಲು ಕೃಷಿ ಭೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮನೆಗೆ ತೆರಳುವ ಧಾವಂತದಲ್ಲಿದ್ದ ಶಂಕರಪ್ಪ ಗದ್ದೆ ಅಂಚಿನಿಂದ ಕಾಲು ಜಾರಿ ಹಳ್ಳಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಕೃಷಿ ಜಮೀನಿನಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಶಂಕರಪ್ಪ ಕುಟುಂಬದ ಆಧಾರ ಸ್ತಂಭವಾಗಿದ್ದರು. ಅವರಿಗೆ ಪತ್ನಿ, 8ನೇ ತರಗತಿ ಓದುತ್ತಿರುವ ಪುತ್ರ ಇದ್ದಾರೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್‌ ಡಾ.ಶ್ರೀಪಾದ್‌, ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್‌ ಹೆಗ್ಡೆ, ರಾಜಸ್ವ ನಿರೀಕ್ಷಕ ಮಂಜುನಾಥ್‌ ಹಾಗೂ ಸಿಬ್ಬಂದಿ ಭೇಟಿ ನೀಡಿಪರಿಶೀಲಿಸಿದರು. ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು