ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿಢೀರ್‌ ಮಳೆಗೆ ಜನ ಜೀವನ ಅಸ್ತವ್ಯಸ್ತ

Last Updated 17 ಮೇ 2022, 4:32 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯ ಹಲವಡೆ ಸೋಮವಾರ ಸಂಜೆ ಗಾಳಿ, ಗುಡುಗು ಸಹಿತ ಜೋರು ಮಳೆಯಾಗಿದೆ. ದಿಢೀರ್‌ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಚಂಡಮಾರುತದ ಪರಿಣಾಮ ಕಳೆದ ವಾರ ಜಿಲ್ಲೆಯ ವಿವಿಧೆಡೆ ಮಳೆಯಾಗಿತ್ತು. ಎರಡು ದಿನಗಳಿಂದ ಮಳೆ ಬಿಡುವು ನೀಡಿತ್ತು. ಈ ಮಧ್ಯೆ ದಿಢೀರ್‌ ಮಳೆಯಾಗಿದೆ. ಇದರಿಂದ ಸಂಜೆ ವೇಳೆ ವ್ಯಾಪಾರಸ್ತರಿಗೆ ತೊಂದರೆ ಉಂಟಾಗಿತ್ತು.

ಭದ್ರಾವತಿ, ಶಿಕಾರಿಪುರ, ಶಿವಮೊಗ್ಗ, ಸೊರಬ, ಶಿರಾಳಕೊಪ್ಪ, ಸಾಗರ, ಆನಂದಪುರ, ಹೊಸನಗರ, ಕೋಣಂದೂರು, ತುಮರಿ ಬ್ಯಾಕೋಡು ಸುತ್ತಮುತ್ತ ಗಾಳಿ ಸಹಿತ ಜೋರು ಮಳೆಯಾಗಿದೆ.

ಆನವಟ್ಟಿಯಲ್ಲಿ 1 ಗಂಟೆಗಳ ಕಾಲ ಸುರಿದ ಮಳೆಗೆ ಚರಂಡಿ ನೀರು ರಸ್ತೆ ಮೇಲೆ ಹರಿದಿದೆ. ಇದರಿಂದ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡಿದರು. ಹಲವಡೆ ವಿದ್ಯುತ್‌ ವ್ಯತ್ಯಯವಾಗಿ ತೊಂದರೆ ಅನುಭವಿಸಿದರು.

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗೆ ಸಿದ್ಧತೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT