ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರಿ ಮಳೆಗೆ ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿ

Published 27 ಜೂನ್ 2024, 7:18 IST
Last Updated 27 ಜೂನ್ 2024, 7:18 IST
ಅಕ್ಷರ ಗಾತ್ರ

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಚುರುಕುಗೊಂಡಿದ್ದು, ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. ಗುರುವಾರ ಎರಡು ಕ್ರೆಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಹರಿಯಬಿಡಲಾಯಿತು.

ಈ ಮಳೆಗಾಲದಲ್ಲಿ ಮೊದಲು ತುಂಬಿದ ಜಲಾಶಯ ಎಂಬ ಶ್ರೇಯಕ್ಕೂ ತುಂಗಾ ಅಣೇಕಟ್ಟೆ ಪಾತ್ರವಾಯಿತು.

3.24 ಟಿಎಂಸಿ ಅಡಿ ಸಾಮರ್ಥ್ಯದ ತುಂಗಾ ಜಲಾಶಯದ ಗರಿಷ್ಠ ಮಟ್ಟ 588.24 ಮೀಟರ್ ಇದೆ. ಗುರುವಾರ ಸಂಪೂರ್ಣ (584.24 ಮೀಟರ್) ಭರ್ತಿಯಾಗಿದೆ. ಜಲಾಶಯಕ್ಕೆ ಒಳಹರಿವು 6,766 ಕ್ಯುಸೆಕ್ ಇದ್ದು, ಎರಡು ಕ್ರೆಸ್ ಗೇಟ್‌ಗಳನ್ನು ತೆರೆದು 5285 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಉಳಿದ ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸಲಾಗುತ್ತಿದೆ ಎಂದು ತುಂಗಾ ಜಲಾಶಯದ ಕಾರ್ಯನಿರ್ವಾಹಕ ಎಂಜಿನಿಯರ್ ತಿಪ್ಪಾನಾಯ್ಕ 'ಪ್ರಜಾವಾಣಿ' ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT