ಭಾನುವಾರ, ಜೂನ್ 13, 2021
26 °C

ತೀರ್ಥಹಳ್ಳಿ ಸುತ್ತ ಭಾರಿ ಮಳೆ: ತುಂಗಾ ಜಲಾಶಯದಿಂದ ನದಿಗೆ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯ ಎಲ್ಲೆಡೆ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ ಇದ್ದು, ಬಿಟ್ಟುಬಿಟ್ಟು ಸಾಧಾರಣ ಮಳೆಯಾಗಿದೆ.

ಶಿವಮೊಗ್ಗ, ಹೊಸನಗರ, ಶಿಕಾರಿಪುರದಲ್ಲಿ ಸಾಧಾರಣ ಮಳೆಯಾಗಿದ್ದು, ಸಾಗರದಲ್ಲಿ ತುಂತುರು ಮಳೆಯಾಗಿದೆ.

ಆಗುಂಬೆ, ತೀರ್ಥಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಶೀತ ಮಾರುತ ಬೀಸುತ್ತಿದೆ. ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ನದಿ, ನಾಲೆ ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. 

ತುಂಗಾ ಜಲಾನಯನ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ ಸಮುದ್ರ ಮಟ್ಟದಿಂದ 588.24 ಮೀಟರ್‌ ಇದ್ದು, ಸಂಪೂರ್ಣ ಭರ್ತಿಯಾಗುತ್ತಿದೆ. ಒಂದು ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಜಲಾಶಯದಿಂದ ನದಿಗೆ 1000 ಕ್ಯುಸೆಕ್ ನೀರು ಹರಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.