ಶುಕ್ರವಾರ, ಆಗಸ್ಟ್ 12, 2022
20 °C

ಆಂಗುಬೆಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಆಗುಂಬೆ ಮಾರ್ಗದಲ್ಲಿ ಮಣ್ಣು ಕುಸಿತದ ಕಾರಣ ಮುಂಜಾಗ್ರತಾ ಕ್ರಮವಾಗಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶಿಸಿದ್ದಾರೆ.

ಜಿಲ್ಲೆಯ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿಯ ಮಾರ್ಗ ಬದಿ ಮಣ್ಣು ಕುಸಿತವಾಗುವ ಸಂಭವವಿರುವುದರಿಂದ ‌ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

12 ಟನ್ ಅಧಿಕ ಭಾರದ ವಾಹನಗಳು ಶಿವಮೊಗ್ಗ-ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಕೆರೆಕಟ್ಟೆ-ಕಾರ್ಕಳ-ಉಡುಪಿ-ಮಂಗಳೂರು ಅಥವಾ ಶಿವಮೊಗ್ಗ–ತೀರ್ಥಹಳ್ಳಿ-ಮಾಸ್ತಿಕಟ್ಟೆ- ಹುಲಿಕಲ್-ಹೊಸಂಗಡಿ-ಸಿದ್ಧಾಪುರ-ಉಡುಪಿ ಮಾರ್ಗಗಳ ಮೂಲಕ ಸಂಚರಿಸುವಂತೆ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.