ಸಾಗರ: ಇಲ್ಲಿನ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಚುನಾವಣೆ ಆ. 26ಕ್ಕೆ ಚುನಾವಣೆ ನಿಗದಿಯಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಬಿಸಿಎಂ (ಎ) ಮೀಸಲಾತಿ ನಿಗದಿಯಾಗಿತ್ತು. ಮೀಸಲಾತಿಯನ್ನು ನಿಗದಿಗೊಳಿಸುವಾಗ ರೋಸ್ಟರ್ ಪದ್ಧತಿ ಅನುಸರಿಸಿಲ್ಲ ಎಂದು ದೂರಿ ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯೆ ಎನ್.ಲಲಿತಮ್ಮ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಚುನಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ. 26ಕ್ಕೆ ನಿಗದಿಯಾಗಿದ್ದ ಚುನಾವಣೆ ಮುಂದಕ್ಕೆ ಹೋಗಿದೆ.