ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಭೂಮಿ ಅನ್ಯ ಉದ್ದೇಶಕ್ಕೆ ಮಂಜೂರು ಆದೇಶ ರದ್ದು

Last Updated 9 ಡಿಸೆಂಬರ್ 2020, 5:46 IST
ಅಕ್ಷರ ಗಾತ್ರ

ಬೆಂಗಳೂರು: ಶಿವಮೊಗ್ಗ ಜಿಲ್ಲೆ ಆಯನೂರು ಹೋಬಳಿಯ ವೀರಣ್ಣನ ಬೆನವಳ್ಳಿ ಗ್ರಾಮದ ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಮಂಜೂರು ಮಾಡಿದ ಜಿಲ್ಲಾಧಿಕಾರಿ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಜಿಲ್ಲಾಧಿಕಾರಿ ಆದೇಶ ಪ್ರಶ್ನಿಸಿ ಪಿ. ಮಂಜಪ್ಪ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರಣ್ಯ ಇಲಾಖೆಗೆ ಸೇರಿದ ಜಾಗವನ್ನು 1966ರಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಹಸ್ತಾಂತರಿಸಿತ್ತು.ಇದನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಲು 2007ರಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.

‘ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಈ ಜಾಗವನ್ನು ಅರಣ್ಯೇತರ ಉದ್ದೇಶಕ್ಕೆ ಮಂಜೂರು ಮಾಡಲಾಗಿದೆ. ಜಿಲ್ಲಾಧಿಕಾರಿ ಆದೇಶ ಹೊರಡಿಸುವಾಗ ಈ ಅಂಶಗಳನ್ನು ಪರಿಗಣಿಸಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT