ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆದ್ದಾರಿ ಕಾಮಗಾರಿ: ಡಿ.ಜಿಯೊಂದಿಗೆ ಬಿವೈಆರ್ ಸಭೆ

Published : 28 ಸೆಪ್ಟೆಂಬರ್ 2024, 15:39 IST
Last Updated : 28 ಸೆಪ್ಟೆಂಬರ್ 2024, 15:39 IST
ಫಾಲೋ ಮಾಡಿ
Comments

ಶಿವಮೊಗ್ಗ: ಕೇಂದ್ರ ಭೂಸಾರಿಗೆ ಸಚಿವಾಲಯದ ಮಹಾ ನಿರ್ದೇಶಕ (ಡಿಜಿ) ಧರ್ಮೇಂದ್ರ ಸಾರಂಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿವೀಕ್ಷಣೆಗೆ ಶನಿವಾರ ನಗರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಅವರೊಂದಿಗೆ ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳಾದ ಸಿಗಂದೂರು ಸೇತುವೆ, ಚಿತ್ರದುರ್ಗ–ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ರಸ್ತೆ, ಸಾಗರದ ಚತುಷ್ಪಥ ರಸ್ತೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚಿಸಿದ ಸಂಸದ ಬಿ.ವೈ. ರಾಘವೇಂದ್ರ, ಟೆಂಡರ್ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳಾದ ಶಿವಮೊಗ್ಗ–ಆನಂದಪುರ ನಾಲ್ಕು ಪಥದ ರಸ್ತೆ, ನೆಲ್ಲಿಸರದಿಂದ ತೀರ್ಥಹಳ್ಳಿವರೆಗಿನ ನಾಲ್ಕು ಪಥದ ರಸ್ತೆ, ಬೈಂದೂರು–ನಾಗೋಡಿವರೆಗಿನ ದ್ವಿಪಥ ರಸ್ತೆ, ಬೈಂದೂರು–ನಾಗೋಡಿವರೆಗಿನ ದ್ವಿಪಥ ರಸ್ತೆ ಹಾಗೂ ಹೊಸೂರು ಮತ್ತು ತಾಳಗುಪ್ಪ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳನ್ನು ಶೀಘ್ರ ಆರಂಭಿಸುವಂತೆ ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಕೇಂದ್ರ ಭೂಸಾರಿಗೆ ಸಚಿವಾಲಯದ ಪ್ರಾದೇಶಿಕ ಅಧಿಕಾರಿ ನರೇಂದ್ರ ಶರ್ಮಾ, ರಾಷ್ಟ್ರೀಯ ಹೆದ್ದಾರಿ ಅಧೀಕ್ಷಕ ಎಂಜಿನಿಯರ್ ರಾಜೇಶ್, ಕಾರ್ಯಪಾಲಕ ಎಂಜಿನಿಯರ್ ದಿವಾಕರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT