ಹೊಳೆಹೊನ್ನೂರು: ಸಮೀಪದ ಮಲ್ಲಾಪುರದ ಸಂತೆ ಮೈದಾನದ ಬಳಿ ಓವರ್ ಹೆಡ್ ಟ್ಯಾಂಕ್ಗೆ ನೀರು ಸರಬರಾಜು ಮಾಡುವ ಪೈಪ್ ಒಡೆದು ಹೋಗಿದ್ದು, ಅದಕ್ಕೆ ಚರಂಡಿ ನೀರು ಸೇರುತ್ತಿದೆ ಎಂದು ಸ್ಥಳೀಯರು ಆರೋಪಿಸಿದರು.

ಪೈಪ್ಲೈನ್ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಬದಿ ಮುಖ್ಯ ಪೈಪ್ಲೈನ್ ಒಡೆದು ತಿಂಗಳುಗಳೇ ಕಳೆದಿವೆ. ಅದರ ದುರಸ್ತಿಗೆ ಗ್ರಾಮ ಪಂಚಾಯಿತಿ ಮೀನಮೇಷ ಏಣಿಸುತ್ತಿದೆ. ಅವರ ನಿರ್ಲಕ್ಷ್ಯದಿಂದಾಗಿ ನಿವಾಸಿಗಳಿಗೆ ಆರೋಗ್ಯ ಸಮಸ್ಯೆಗಳು ತಲೆದೋರುತ್ತಿವೆ. ಮೈದೊಳಲಿನಲ್ಲಿ ಹಿಂದೆ ಕಲುಷಿತ ನೀರು ಸೇವಿಸಿ 7 ಜನ ಸಾವಿಗೀಡಾಗಿದ್ದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪದೇ ಪದೇ ನೀರಿನಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಇಷ್ಟಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ದೂರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-180156991

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.