ಹೊಳೆಹೊನ್ನೂರು: ಪಟ್ಟಣದಿಂದ ಭದ್ರಾವತಿಗೆ ಹೋಗುವ ರಸ್ತೆಯ ಎರಡು ಬದಿಯಲ್ಲಿ 45ಕ್ಕೂ ಹೆಚ್ಚು ಮರಗಳು ಒಣಗಿ ನಿಂತಿವೆ.

ಕೊಂಬೆಗಳು ರಸ್ತೆಯತ್ತ ಚಾಚಿರುವುದರಿಂದ ಮಳೆ– ಗಾಳಿಗೆ ಮುರಿದು ಬೀಳುವ ಅಪಾಯವಿದೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರಿಗೆ ಆತಂಕ ಶುರುವಾಗಿದೆ.

‘ಒಣಗಿದ ಮರಗಳು ಅಥವಾ ಕೊಂಬೆಗಳು ಗಾಳಿ ಮಳೆಗೆ ವಾಹನ ಸವಾರರ ಮೇಲೆ ಬಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕೂಡಲೇ ಲೋಕೋಪಯೋಗಿ ಇಲಾಖೆ ಮತ್ತು ಅರಣ್ಯ ಇಲಾಖೆ ಈ ಬಗ್ಗೆ ಎಚ್ಚೆತ್ತು ಕ್ರಮ ಕೈಗೊಳ್ಳಬೇಕು. ಈಗಾಗಲೇ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದಿದ್ದು, ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಹೊಳೆಹೊನ್ನೂರು ನಿವಾಸಿ ವೆಂಕಟೇಶ್ ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-42-1217932313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.