ಗುರುವಾರ , ಅಕ್ಟೋಬರ್ 22, 2020
25 °C
26ರೊಳಗೆ ದೇವರ ದರ್ಶನ ಪಡೆಯಲು ಮನವಿ

ಹೊಂಬುಜ ಕ್ಷೇತ್ರ: 26ರಿಂದ ಜೀರ್ಣೋದ್ಧಾರ ಕಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಿಪ್ಪನ್‌ಪೇಟೆ: ಸಮೀಪದ ಶ್ರೀ ಕ್ಷೇತ್ರ ಹೊಂಬುಜ ಮಠದ ಮಾತೆ ಪದ್ಮಾವತಿ ದೇವಿ ಹಾಗೂ ಪಾರ್ಶ್ವನಾಥ ಸ್ವಾಮಿಯ ಜೀರ್ಣೋದ್ಧಾರ ಕಾರ್ಯ ಅ.‌ 26ರಿಂದ ನಡೆಯಲಿದೆ.

ಮಠದ ಪೀಠಾಧಿಕಾರಿ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ನೇತೃತ್ವದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯಲಿದೆ. ಕೋವಿಡ್–19 ಕಾರಣ ಮಠಕ್ಕೆ ಭೇಟಿ ನೀಡಲು ಸಾಧ್ಯವಾಗದ ರಾಜ್ಯ ಹಾಗೂ ಹೊರ ರಾಜ್ಯದ ಭಕ್ತರು ಶ್ರೀಕ್ಷೇತ್ರಕ್ಕೆ ಅ. 26ರ ಮುಂಚಿತವಾಗಿ ಭೇಟಿ ನೀಡಿ ದೇವಿ ದರ್ಶನ ಪಡೆಯಬೇಕು ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ.

ಬಳಿಕ ನಿತ್ಯ ಪೂಜಾ ಕೈಂಕರ್ಯ ಹೊರತು ಪಡಿಸಿ ವಿಶೇಷ ಪೂಜೆಗೆ ಅವಕಾಶವಿಲ್ಲ ಎಂದು ಮಠದ ಆಡಳಿತಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.