ರಿಪ್ಪನ್‌ಪೇಟೆ:ಪಟ್ಟಣದ ವಿನಾಯಕ ವೃತ್ತದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಮಾರ್ಗವಾಗಿ ಶಿರಸಿಗೆಗೆ ಹೋಗುತ್ತಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ವಾಹನಕ್ಕೆ ತಡೆ ಹಾಕಲು ಮುಂದಾದರು.

ಪೊಲೀಸರು ಪ್ರತಿಭಟನಕಾರರು ವಾಹನ ತಡೆ ಯತ್ನವನ್ನು ವಿಫಲಗೊಳಿಸಿದರು.

ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್ ಮಾತನಾಡಿ, ‘ಸಚಿವ ಕೆ.ಎಸ್. ಈಶ್ವರಪ್ಪ ಅವರ ಬೆದರಿಕೆಗೆ ಹೆದರಿ ಸಂತೋಷ್ ಪಾಟೀಲ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿಸದಸ್ಯ ಬಂಡಿ ರಾಮಚಂದ್ರ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ವಿ. ಈಶ್ವರಪ್ಪಗೌಡ, ಅಮೀರ್ ಹಂಜಾ, ಹೋಬಳಿ ಘಟಕದ ಅಧ್ಯಕ್ಷ ಆಸಿಫ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್. ಚಂದ್ರೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್, ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಬೇದುಲ್ಲಾ ಷರೀಫ್, ಸ್ಥಳೀಯ ಮುಖಂಡರುಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.