ಶನಿವಾರ, ಮೇ 21, 2022
23 °C

ಅಪಘಾತದಲ್ಲಿ ಗಾಯಗೊಂಡವರಿಗೆ ಸಚಿವ ಆರಗ ಉಪಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕು ಮಂಡಗದ್ದೆಯ ಬಳಿ ಶನಿವಾರ ಬೈಕ್‌ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ಇಬ್ಬರು ಯುವಕರನ್ನು ಅದೇ ದಾರಿಯಲ್ಲಿ ಬಂದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉಪಚರಿಸಿ, ತಮ್ಮ ಬೆಂಗಾವಲು ವಾಹನದಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕು ಜೇಡಿಕುಣಿಯ ಸುಬ್ರಮಣ್ಯ (19) ಹಾಗೂ ಸಾಲೂರಿನ ಸಂಪತ್ತು (20) ಅವರು ಬೈಕ್‌ನಲ್ಲಿ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವಾಗ ರಸ್ತೆ ಬದಿ ಉರುಳಿ ಬಿದ್ದಿದ್ದಾರೆ.

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಆರಗ ಅವರು ರಸ್ತೆ ಬದಿ ಬೈಕ್ ಸವಾರರು ಬಿದ್ದಿದ್ದ ದೃಶ್ಯ ನೋಡಿ ವಾಹನ ನಿಲ್ಲಿಸಲು ಸೂಚಿಸಿದ್ದಾರೆ. ಕೆಳಗೆ ಇಳಿದುಹೋಗಿ ನೀರು ಕುಡಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿಅವರಿಗೆ ಧೈರ್ಯ ತುಂಬಿದ್ದಾರೆ. ಅಲ್ಲಿ ನೆಟ್‌ವರ್ಕ್‌ ಸಿಗದ ಕಾರಣ ಆಂಬುಲೆನ್ಸ್‌ಗೆ ಕರೆ ಮಾಡಲು ಸಾಧ್ಯವಾಗಿಲ್ಲ. ತಕ್ಷಣ ತಮ್ಮ ಬೆಂಗಾವಲು ವಾಹನದ ಸಿಬ್ಬಂದಿಗೆ ಅವರನ್ನು ಆಸ್ಪತ್ರೆಗೆ ಸಾಗಿಸುವಂತೆ ಸೂಚಿಸಿದ್ದಾರೆ. ಅವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು