ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಮಾ.9ರಂದು ಯಡಿಯೂರಪ್ಪ, ರಾಘವೇಂದ್ರಗೆ ಸನ್ಮಾನ

Published 7 ಮಾರ್ಚ್ 2024, 15:14 IST
Last Updated 7 ಮಾರ್ಚ್ 2024, 15:14 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಪ್ರ ಸ್ನೇಹ ಬಳಗ ವತಿಯಿಂದ ಮಾ.9ರಂದು ಸಂಜೆ 6.30ಕ್ಕೆ ಇಲ್ಲಿನ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸನ್ಮಾನಿಸಲಾಗುವುದು ಎಂದು ಬ್ರಾಹ್ಮಣ ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ನಟರಾಜ್ ಭಾಗವತ್ ಹೇಳಿದರು.


ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಅಭಿವೃದ್ಧಿಯ ಹರಿಕಾರರು. ಆದ್ದರಿಂದ, ಇಬ್ಬರನ್ನೂ ಕೂಡ ವಿಪ್ರ ಸ್ನೇಹ ಬಳಗದ ವತಿಯಿಂದ ಸನ್ಮಾನಿಸಲಾಗುತ್ತದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಅಖಿಲಾ ಕರ್ನಾಟಕ ಬ್ರಾಹ್ಮಣ ಮಹಾಸಭದ ಅಧ್ಯಕ್ಷ ಅಶೋಕ್ ಹರ‍್ನಹಳ್ಳಿ, ಶಾಸಕ ಎಸ್.ಎನ್. ಚನ್ನಬಸಪ್ಪ, ಶಿಕ್ಷಣ ತಜ್ಞ ಎ.ಜೆ. ರಾಮಚಂದ್ರ ಸೇರಿ ಗಣ್ಯರು ಉಪಸ್ಥಿತರಿರುವರು ಎಂದರು.

ಪ್ರಮುಖರಾದ ಶ್ರೀನಾಥ್ ನಗರಗದ್ದೆ, ಎಂ.ಶಂಕರ್, ವೆಂಕಟೇಶರಾವ್, ಸುಬ್ರಹ್ಮಣ್ಯ ಭಟ್ಟ, ನಾಗೇಶ್, ಬಿ.ಆರ್.ಮಧುಸೂದನ್, ಸುರೇಖಾ ಮುರುಳೀಧರ್, ಎ.ಜೆ. ರಾಮಚಂದ್ರ, ಎಸ್.ಜಿ. ಆನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT