ವಿಧಾನಸಭಾ ಕ್ಷೇತ್ರದ ಮನ್ನಣೆ ಇಲ್ಲದಿರುವುದು ತಾಲ್ಲೂಕಿನ ಒಟ್ಟಾರೆ ಅಭಿವೃದ್ಧಿಗೆ ತೊಂದರೆ ಆಗಿದೆ. ಶರಾವತಿಗೆ ಭೂಮಿ ಕೊಟ್ಟಿದ್ದೇವೆ. ದೇಶದ ಅಭಿವೃದ್ಧಿಯಲ್ಲಿ ನಮ್ಮ ಪಾತ್ರ ದೊಡ್ಡದು. ನಮಗೆ ಮನ್ನಣೆ ಇಲ್ಲದಿದ್ದರೆ ಹೇಗೆ?
ಕಲಗೋಡು ರತ್ನಾಕರ ಮಾಜಿ ಅಧ್ಯಕ್ಷ ಜಿಲ್ಲಾ ಪಂಚಾಯಿತಿ
ಹೊಸನಗರ ಸ್ವತಂತ್ರ ವಿಧಾನಸಭಾ ಕ್ಷೇತ್ರಕ್ಕೆ ಒತ್ತಾಯಿಸಿ ಈಗಾಗಲೇ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಕೊಟ್ಟಿದ್ದೇವೆ. ಜನಹೋರಾಟಕ್ಕೆ ಮೂಲೆಗದ್ದೆ ಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ನಡೆಸಲಿದ್ದೇವೆ
ಬಿ.ಸ್ವಾಮಿರಾವ್ ಮಾಜಿ ಶಾಸಕರು
ಭೌಗೋಳಿಕವಾಗಿ ಸಾಗರ–ಹೊಸನಗರ ಕ್ಷೇತ್ರದ ವ್ಯಾಪ್ತಿ 270 ಕಿ.ಮೀ ಆಗುತ್ತದೆ. ಅಭಿವೃದ್ಧಿಗೆ ಅನುದಾನ ಸಾಕಾಗದು. ಸ್ವತಂತ್ರ ಕ್ಷೇತ್ರದ ಹೋರಾಟಕ್ಕೆ ಬೆಂಬಲ ನೀಡಲಿದ್ದೇನೆ. ಕ್ಷೇತ್ರ ಪುನರ್ ವಿಂಗಡಣೆ ಸಂದರ್ಭ ಪರಿಗಣಿಸಿದರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದು
ಬೇಳೂರು ಗೋಪಾಲಕೃಷ್ಣ ಸಾಗರ ಶಾಸಕ
ಹೊಸನಗರದ ಭೌಗೋಳಿಕ ವ್ಯಾಪ್ತಿ ಬಹಳ ದೊಡ್ಡದಿದೆ. ಮುಳುಗಡೆ ಪ್ರದೇಶ ಒಳಗೊಂಡಂತೆ ಸ್ಥಳೀಯವಾಗಿ ಸಂಪರ್ಕ ಸಾಧನಗಳು ಇಲ್ಲ. ವಿಧಾನಸಭಾ ಕ್ಷೇತ್ರ ಚಿಕ್ಕದಾಗಿದ್ದರೆ ಅಭಿವೃದ್ಧಿ ಸಾಧ್ಯ. ಹೀಗಾಗಿ ತಾಲ್ಲೂಕಿನ ಜನರ ಹೋರಾಟಕ್ಕೆ ನನ್ನ ಬೆಂಬಲವೂ ಇದೆ
ಆರಗ ಜ್ಞಾನೇಂದ್ರ ತೀರ್ಥಹಳ್ಳಿ ಶಾಸಕ
ಶರಾವತಿ ಮುಳುಗಡೆ ಸಂತ್ರಸ್ತರ ನೆಲೆ ಹೊಸನಗರ ಕ್ಷೇತ್ರ. ಅಲ್ಲಿನ ಜನರ ಬವಣೆಗಳ ನಿವಾರಣೆಗೆ ಆವೈಜ್ಞಾನಿಕ ನೀತಿಯಿಂದ ಕೈತಪ್ಪಿ ಹೋಗಿರುವ ಕ್ಷೇತ್ರ ಪುನರ್ ರಚನೆ ಮಾಡುವುದು ಅತ್ಯಗತ್ಯ