ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ನಾಡು ಧರ್ಮ, ಸಂಸ್ಕೃತಿಯ ಸಂಗಮ’

Last Updated 2 ನವೆಂಬರ್ 2021, 6:26 IST
ಅಕ್ಷರ ಗಾತ್ರ

ಹೊಸನಗರ: ‘ಕನ್ನಡ ನಾಡು ವಿವಿಧ ಧರ್ಮ, ಸಂಸ್ಕೃತಿಗಳ ಸಂಗಮ. ನಮ್ಮ ನೆಲದಲ್ಲಿ ಪರಭಾಷಿಕರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಕನ್ನಡದ ಅಸ್ತಿತ್ವಕ್ಕೆ ಮಾರಕವಾಗಿದೆ’ ಎಂದು ತಹಶೀಲ್ದಾರ್ ವಿ.ಎಸ್. ರಾಜೀವ್ ಹೇಳಿದರು.

ತಾಲ್ಲೂಕು ಕಚೇರಿಯಲ್ಲಿ ಹಾಗೂ ನೆಹರೂ ಮೈದಾನದ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪಟ್ಟಣ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್ ಮತ್ತು ವಿವಿಧ ಇಲಾಖೆಗಳು ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಹಲವು ದಾರ್ಶನಿಕರು ಬಾಳಿ ಬದುಕಿದ ನೆಲೆಯೇ ಹೆಮ್ಮೆಯ ಕನ್ನಡ ನಾಡು. ಈ ರಾಜ್ಯದಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಕನ್ನಡ ನಾಡಿನ ಹೆಮ್ಮೆಯ ಪುತ್ರರು ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಕೃಷ್ಣವೇಣಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ವೃತ್ತ ನಿರೀಕ್ಷಕ ಮಧುಸೂಧನ್, ಪಿಎಸ್‌ಐ ರಾಜೇಂದ್ರನಾಯ್ಕ್, ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ, ಇಒ ಪ್ರವೀಣ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಾಲಚಂದ್ರಪ್ಪ ಟಿ., ನಾಡಹಬ್ಬಗಳ ಸಮಿತಿ ಸದಸ್ಯರಾದ ಶ್ರೀಧರ ಉಡುಪ, ಶ್ರೀನಿವಾಸ್ ಕಾಮತ್, ರಾಜಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ ಇಲಿಯಾಸ್, ಗಂಗಾಧರಯ್ಯ, ವಿಜೆಂದ್ರಶೇಟ್, ಗಾಯಿತ್ರಿ ನಾಗರಾಜ್, ಹಾಲಗದ್ದೆ ಉಮೇಶ್, ಗುರುರಾಜ್ ಆರ್., ವಿನಯ್ ಎಂ. ಆರಾಧ್ಯ, ವೆಂಕಟೇಶ್ ಮೂರ್ತಿ, ನವೀನ್ ರೇಣುಕಯ್ಯ, ಕೌಶಿಕ್, ಚಿರಾಗ್, ರಾಕೇಶ್, ಸುಧೀಂದ್ರಕುಮಾರ್, ಶ್ರೀಕಾಂತ್ ಹೆಗಡೆ ಇದ್ದರು.

ಕೋಡೂರಿನಲ್ಲಿ ಆಚರಣೆ:ತಾಲ್ಲೂಕಿನ ಕೋಡೂರು ಬ್ಲಾಸಂ ಅಕಾಡೆಮಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾದಾಯಿತಿ ಟ್ರಸ್ಟ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೌಡ, ‘ಕನ್ನಡ ಭಾಷೆ ಕೇವಲ ಭಾಷೆ ಮಾತ್ರವಲ್ಲ. ಅದು ನಮ್ಮ ಆಸ್ಮಿತೆಯ ರೂಪ. ಮಾತೃ ಭಾಷೆಯನ್ನು ಪ್ರತಿಯೊಬ್ಬ ಕನ್ನಡಿಗರು ಪ್ರೀತಿಯಿಂದ ಆರಾಧಿಸಿದರೆ ಮಾತ್ರ ಭಾಷೆ ಉಳಿಯಲು ಸಾಧ್ಯ’ ಎಂದರು.

ಅಕಾಡೆಮಿ ಸದಸ್ಯರಾದ ದಿವಾಕರ್ ಶೆಟ್ಟಿ, ಬಿ.ಎಸ್. ಸುರೇಶ್, ಗುರುರಾಜ್ ಕೆ., ಬ್ಲಾಸಂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT