ಹೊಸನಗರ: ‘ಮುಳುಗಡೆ ಶಾಪದಿಂದ ಸರ್ವಸ್ವ ಕಳೆದುಕೊಂಡ ತಾಲ್ಲೂಕಿಗೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆ ಆಗಬೇಕು’ ಎಂದು ಸಮ್ಮೇಳನದ ಅಧ್ಯಕ್ಷ ಎಂ.ಎಂ. ಪ್ರಭಾಕರ ಕಾರಂತ ಹಕ್ಕೂತ್ತಾಯ ಮಂಡಿಸಿದರು.

ಪಟ್ಟಣದ ಸೀತಾರಾಮ ಕಲ್ಯಾಣ ಮಂದಿರದಲ್ಲಿ ಶುಕ್ರವಾರ ನಡೆದ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಹೊಸನಗರ ತಾಲ್ಲೂಕು ತನ್ನೊಡಲಿನಲಿ ಐದಾರು ಜಲಾಶಯಗಳನ್ನು ನಿರ್ಮಿಸಿಕೊಂಡು ಮುಳುಗಡೆ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡು ಬಡವಾಗಿದೆ. ಇದು ಸಾಲದೆಂಬಂತೆ ತಾಲ್ಲೂಕಿನಲ್ಲಿದ್ದ ವಿಧಾನಸಭಾ ಕ್ಷೇತ್ರವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಗಾಯದ ಮೇಲೆ ಉಪ್ಪು ಸುರಿದಂತೆ ಆಗಿದೆ. ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ತಾಲ್ಲೂಕಿನಲ್ಲಿ ಹೋರಾಟದ ಕೂಗು ಎದ್ದಿರುವುದು ಸಮಾಧಾನ ತಂದಿದೆ’ ಎಂದು ಹೇಳಿದರು.

ಜಿಲ್ಲೆಯಲ್ಲಿಯೇ ಹೊಸನಗರ ಬಹು ದೊಡ್ಡ ತಾಲ್ಲೂಕು, ಆದರೆ ಅಭಿವೃದ್ಧಿ ದೃಷ್ಟಿಯಲ್ಲಿ ಹಿಂದುಳಿದ ತಾಲ್ಲೂಕು ಆಗಿದೆ. ಮುಳುಗಡೆ ಹೊಡೆತಕ್ಕೆ ನಲುಗಿ ತನ್ನ ತನವನ್ನು ಕಳೆದುಕೊಂಡು ಅನಾಥವಾಗಿದ್ದು ಈಗ ಇತಿಹಾಸ. ಹಿಂದುಳಿದ ತಾಲ್ಲೂಕಿನ ಜನರ ದನಿಯಾಗಿ ಆಸರೆಯಾಗಿದ್ದ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಮತ್ತೊಮ್ಮೆ ಶಾಪಗ್ರಸ್ತವಾಗಿದ್ದು ಬೇಸರದ ಸಂಗತಿ. ಇದೀಗ ಕಳೆದುಕೊಂಡು ಕ್ಷೇತ್ರವನ್ನು ಮರು ಸ್ಥಾಪನೆ ಮಾಡುವ ಕುರಿತು ತಾಲ್ಲೂಕಿನಲ್ಲಿ ಹೋರಾಟ ಹದವಾಗುತ್ತಿದೆ. ಇತ್ತ ಸರ್ಕಾರ ಗಮನಹರಿಸಿ ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆ ಮಾಡಿ ಅನ್ಯಾಯಕ್ಕೆ ಒಳಗಾಗಿದ್ದ ಜನರಿಗೆ ನ್ಯಾಯ ಒದಗಿಸಬೇಕು ಎಂದು ಅಭಿಪ್ರಾಯಪಟ್ಟರು.

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ‘ಸಮ್ಮೇಳನ ಆಯೋಜನೆಯಿಂದ ಕನ್ನಡ ಸಾಹಿತ್ಯ ಬೆಳವಣಿಗೆಗೆ ಸಹಕಾರಿ ಆಗಿದೆ. ಸರ್ಕಾರದಿಂದ ಸಾಕಷ್ಟು ಅನುದಾನ ಬರುತ್ತಿಲ್ಲ. ಸಮ್ಮೇಳನ ನಡೆಸುವುದು ಕಷ್ಟದ ಕೆಲಸವಾಗಿದೆ. ಈ ಕುರಿತು ಸರ್ಕಾರದ ಹಂತದಲ್ಲಿ ಮಾತನಾಡಿದ್ದೇನೆ. ಮುಂದಿನ ದಿನಗಳಲ್ಲಿ ಸಾಕಷ್ಟು ಅನುದಾನ ತರುವಲ್ಲಿ ಶ್ರಮಿಸುವೆ’ ಎಂದು ಭರವಸೆ ನೀಡಿದರು.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾಹಿತಿ ಪ್ರೊ.ಕೃಷ್ಣೇಗೌಡ ಮನದ ಮಾತು ಆಡಿದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಮೂರ್ತಿ ನಾಗರಕೊಡಿಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಡಿ.ಎಸ್. ಶ್ರೀಧರ್ ಮಾತನಾಡಿದರು.

ತಹಶೀಲ್ದಾರ್ ಭರತ್ ರಾಜ್, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್, ಹಿರಿಯ ಸಾಹಿತಿ ಶಾಂತಾರಾಮ ಪ್ರಭು, ತ.ಮ. ನರಸಿಂಹ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ್, ಮಂಜುನಾಥ ಕಾಮತ್ ಇದ್ದರು.

ಅಶ್ವಿನಿ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು. ಸಮ್ಮೇಳನದಲ್ಲಿ ವಿವಿಧ ವಿಚಾರಗೋಷ್ಠಿಗಳು ನಡೆದವು. ಕಾರ್ಯಕ್ರಮಕ್ಕೂ ಮುನ್ನ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-42-882860600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.