ರಿಪ್ಪನ್ಪೇಟೆ: ‘ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಸರ್ವ ಪಕ್ಷಗಳ ನೇತೃತ್ವದಲ್ಲಿ ಏ. 6ರಂದು ಇಲ್ಲಿನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಬಹಿರಂಗ ಸಭೆ ನಡೆಯಲಿದೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲಗೋಡು ರತ್ನಾಕರ ಹೇಳಿದರು.

‘ಹೊಸನಗರ ಕ್ಷೇತ್ರದ ಉಳಿವಿಗೆ ಹೋರಾಟ ಅನಿವಾರ್ಯವಾಗಿದೆ. ಇದರ ಮೊದಲ ಹಂತವಾಗಿ ಏ. 5 ರಂದು ಬಿದನೂರು ನಗರದಿಂದ ಮೂಲೆಗದ್ದೆ ಮಠದ ಪೀಠಾಧಿಕಾರಿ ಅಭಿನವ ಚನ್ನಬಸವ ಸ್ವಾಮೀಜಿ ಮುಂದಾಳತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 6ರಂದು ಸಂಜೆ 4 ಗಂಟೆಗೆ ರಿಪ್ಪನ್ಪೇಟೆಯಲ್ಲಿ ಪಾದಯಾತ್ರೆ ಅಂತ್ಯಗೊಳ್ಳಲಿದೆ. ಬಳಿಕ ಕ್ರೀಡಾಂಗಣದಲ್ಲಿ ಬಹಿರಂಗ ಸಭೆ ನಡೆಯಲಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ರಾಮಚಂದ್ರಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ, ನಿಟ್ಟೂರಿನ ನಾರಾಯಣ ಗುರು ಮಠದ ರೇಣುಕಾನಂದ ಸ್ವಾಮೀಜಿ, ಹೊಂಬುಜ ಜೈನ ಮಠದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಸೇರಿದಂತೆ ಅನೇಕ ಧಾರ್ಮಿಕ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

45 ಕಿ.ಮೀ. ಪಾದಯಾತ್ರೆಯಲ್ಲಿ ಮಾಜಿ ಶಾಸಕ ಬಿ. ಸ್ವಾಮಿರಾವ್, ಹಾಲಿ–ಮಾಜಿ ಶಾಸಕರು ಸೇರಿ ಅಂದಾಜು 10 ಸಾವಿರ ಜನ ಸೇರುವ ನಿರೀಕ್ಷೆ ಇದೆ’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಆಲವಳ್ಳಿ ವೀರೇಶ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-42-675646182

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.