ಹೊಸನಗರ: ‘ತಮಗೆ ಮಂಜೂರಾದ ಜಮೀನಿನ ಪಕ್ಕ ಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದ ರೈತರೊಬ್ಬರು ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿಯಲ್ಲಿ ಧರಣಿ ನಡೆಸಿದರು.

ಮೇಲಿನ ಬೆಸಿಗೆ ಗ್ರಾಮ ಪಂಚಾಯಿತಿಯ ಎಲ್.ಗುಡ್ಡೆಕೊಪ್ಪ ನಿವಾಸಿ ರೈತ ರಾಮನಾಯ್ಕ ಅವರು, ‘ನಮ್ಮ ಕುಟುಂಬಕ್ಕೆ 50 ವರ್ಷಗಳ ಹಿಂದೆ 4 ಎಕರೆ ಸಾಗುವಳಿ ಜಮೀನು ಮಂಜೂರು ಆಗಿದೆ. ಪಕ್ಕ ಪೋಡಿ ಆಗಬೇಕಾಗಿದೆ. ಅರಣ್ಯ ಇಲಾಖೆಯ ಅಭಿಪ್ರಾಯದ ಸಮಸ್ಯೆಯಿಂದ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಯಾವ ಇಲಾಖೆಯಲ್ಲಿ ಕೇಳಿದರೂ ಸೂಕ್ತ ಉತ್ತರ ನೀಡುತ್ತಿಲ್ಲ. ಹಲವು ವರ್ಷಗಳಿಂದ ಇಲಾಖೆಗೆ ಅಲೆದು, ಅಲೆದು ಸಾಕಾಗಿದೆ. ತಾಲ್ಲೂಕು ಕಚೇರಿಯಲ್ಲಿ ಬಡ ರೈತರ ಸಮಸ್ಯೆ ಕೇಳುವವರಿಲ್ಲ’ ಎಂದು ದೂರಿದರು.

ಇಲಾಖೆ ಆವರಣದಲ್ಲಿ ರೈತ ಧರಣಿ ಕುಳಿತ ವಿಚಾರ ಶಾಸಕ ಆರಗ ಜ್ಞಾನೇಂದ್ರ ಅವರ ಗಮನಕ್ಕೆ ಬರುತ್ತಿದ್ದಂತೆ ತಹಶೀಲ್ದಾರ್ ಭರತ್ರಾಜ್ ಧರಣಿ ನಿರತ ರೈತ ರಾಮನಾಯ್ಕ ಅವರ ಮನವೊಲಿಸಿದ್ದಾರೆ.

ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರೇಮನೆ, ಜಿ.ಪಂ. ಮಾಜಿ ಸದಸ್ಯ ಉಮೇಶ್ ಹೊಸನಗರ, ತ.ಮಾ. ನರಸಿಂಹ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-42-299723877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.