ಹೊಸನಗರ: ‘ಮಲೆನಾಡು–ಕರಾವಳಿಯನ್ನು ಸಂಪರ್ಕಿಸುವ ಶಿವಮೊಗ್ಗ–ಶೃಂಗೇರಿ–ಮಂಗಳೂರು ರೈಲು ಮಾರ್ಗ ಹೊಸನಗರ ತಾಲ್ಲೂಕು ಕೇಂದ್ರದ ಮೂಲಕ ಸಾಗಲಿ’ ಎಂದು ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್ ಮಲೇಬೈಲು ಆಗ್ರಹಿಸಿದರು.

‘ಈ ರೈಲು ಮಾರ್ಗದ ಡಿ.ಪಿ.ಆರ್ (ವಿಸ್ತೃತ ಯೋಜನಾ ವರದಿ) ತಯಾರಿಗೆ ಟೆಂಡರ್ ಕರೆಯಲಾಗಿದೆ. ಇದು ಅಂದಾಜು 332 ಕಿ.ಮೀ ಉದ್ದದ ಮಾರ್ಗವಾಗಿದ್ದು, ₹ 3,300 ಕೋಟಿ ಅಂದಾಜು ವೆಚ್ಚದ ಯೋಜನೆಯಾಗಿದೆ. ಇದರ ವ್ಯಾಪ್ತಿಗೆ ಹೊಸನಗರ ತಾಲ್ಲೂಕನ್ನೂ ಸೇರಿಸಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಅರಸಾಳು–ರಿಪ್ಪನ್ಪೇಟೆ, ತೀರ್ಥಹಳ್ಳಿ, ಶೃಂಗೇರಿ ಮೂಲಕ ಮಾರ್ಗ ಹಾದು ಹೋಗುವ ಮಾಹಿತಿ ಲಭ್ಯವಾಗಿದೆ. ಹೊಸನಗರ ತಾಲ್ಲೂಕು ಕೇಂದ್ರವಾಗಿದ್ದು, ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನೂ ಕಳೆದುಕೊಂಡಿದೆ. ಹಾಗಾಗಿ ಹೊಸನಗರವನ್ನು ಈ ಯೋಜನೆಯಿಂದ ಹೊರಗಿಡುವ ಯಾವ ಪ್ರಯತ್ನವೂ ನಡೆಯಬಾರದು. ರೈಲ್ವೆ ಮಾರ್ಗ ಅರಸಾಳು, ರಿಪ್ಪನ್ಪೇಟೆ, ಹೊಸನಗರ, ತೀರ್ಥಹಳ್ಳಿ ಮೂಲಕ ಹಾದು ಹೋಗುವಂತೆ ಮಾಡಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-42-314969799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.