ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಬೆಳಗಿನ ಜಾವ ವಾಕಿಂಗ್‌ಗೆ ಹೋಗಲು ಕಷ್ಟವಾಗುತ್ತಿದೆ. ಅವುಗಳ ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ಕ್ರಮ ಕೈಗೊಳ್ಳಬೇಕು
ಪ್ರಭಾಮಣಿ ಗೃಹಿಣಿ ಹೊಸನಗರ
ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು ಆದೇಶ ಬಂದ ಬಳಿಕ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿದ್ದೇವೆ
ಹರೀಶ್ ಎಂ.ಎನ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ
ಹೊಸನಗರ ತಾಲ್ಲೂಕಿನ ಎಲ್ಲ 10 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಲಸಿಕೆ ಲಭ್ಯವಿದೆ. ನಾಯಿ ಕಡಿತಕ್ಕೊಳಗಾದವರು ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು