ಶಿವಮೊಗ್ಗ: ದೇಶದಲ್ಲಿ ಜನಗಣತಿ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದ ‘ಮನೆಗಳ ಪಟ್ಟಿ ಮತ್ತು ಮನೆ ಗಣತಿ’ ಪ್ರಕ್ರಿಯೆ ಏಪ್ರಿಲ್ 16ರಿಂದ ಮೇ 15ರ ವರೆಗೆ ಒಂದು ತಿಂಗಳು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಒಟ್ಟು 30 ದಿನಗಳು ನಡೆಯುವ ಈ ಗಣತಿಯಲ್ಲಿ ಮನೆಗಳ ಸ್ಥಿತಿಗತಿ, ಲಭ್ಯವಿರುವ ಸೌಲಭ್ಯ, ಆಸ್ತಿಪಾಸ್ತಿಯ ಮಾಹಿತಿ ಸಂಗ್ರಹಿಸಲಾಗುತ್ತದೆ. ಅದಕ್ಕೆ ಪೂರಕವಾಗಿ ಸಾರ್ವಜನಿಕರಿಗೆ ಏ. 1ರಿಂದ 15ರ ವರೆಗೆ ‘ಸ್ವಯಂ ಗಣತಿ’ ಆಯ್ಕೆ ಲಭ್ಯವಿದೆ.

ಸ್ವಯಂ ಗಣತಿಗೆ ಒಳಪಡುವವರು ಕೇಂದ್ರದ ಜನಗಣತಿಯ ಅಧಿಕೃತ ಪೋರ್ಟಲ್ನಲ್ಲಿ ಮೊಬೈಲ್ ಫೋನ್ ಸಂಖ್ಯೆಯೊಂದಿಗೆ ಲಾಗಿನ್ ಆಗಿ, ತಮ್ಮ ಸ್ಥಳ ಆಯ್ಕೆ ಮಾಡಿ, ನಕ್ಷೆಯಲ್ಲಿ ಮನೆ ಗುರುತಿಸಬೇಕು. ಅಗತ್ಯ ಮಾಹಿತಿ ಭರ್ತಿ ಮಾಡಿ ಸಬ್ಮಿಟ್ ಮಾಡಬೇಕು.

ಸಲ್ಲಿಕೆಯ ನಂತರ ಲಭಿಸುವ ಎಸ್ಇ ಐಡಿ ಸುರಕ್ಷಿತವಾಗಿಟ್ಟುಕೊಂಡು ಗಣತಿದಾರರು ಭೇಟಿ ಕೊಟ್ಟಾಗ ಅವರಿಗೆ ತೋರಿಸಬೇಕು.

ಗಣತಿದಾರರ ಕ್ಷೇತ್ರ ಭೇಟಿ:

ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಸ್ವಯಂ ಗಣತಿ ಮಾಡಿಕೊಂಡವರು ತಮ್ಮಲ್ಲಿರುವ ಎಸ್ಇಐಡಿ ಅನ್ನು ಗಣತಿದಾರರಿಗೆ ತೋರಿಸಿ ದತ್ತಾಂಶ ಪರಿಶೀಲಿಸಿಕೊಳ್ಳಬಹುದು. ಒಂದು ವೇಳೆ ಸ್ವಯಂ ಗಣತಿ ಮಾಡದಿದ್ದಲ್ಲಿ, ಗಣತಿದಾರರೇ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುತ್ತಾರೆ.

ಸಾರ್ವಜನಿಕರು, ಅಧಿಕಾರಿಗಳು, ಮತ್ತು ಸಿಬ್ಬಂದಿ https://se.census.gov.in ವೆಬ್ಸೈಟ್ಗೆ ಭೇಟಿ ನೀಡಿ ಸ್ವಯಂ ಗಣತಿಯಲ್ಲಿ ಭಾಗವಹಿಸುಂತೆ ಜಿಲ್ಲಾಡಳಿತ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ತಾಲ್ಲೂಕು ಆಡಳಿತ, ಸ್ಥಳೀಯ ಸಂಸ್ಥೆ ಅಥವಾ ಜಿಲ್ಲಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.