ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆಹೊನ್ನೂರು: ಮನೆ ಗೋಡೆ ಕುಸಿದು 13 ಜನರಿಗೆ ಗಾಯ

Last Updated 27 ಜುಲೈ 2022, 3:02 IST
ಅಕ್ಷರ ಗಾತ್ರ

ಹೊಳೆಹೊನ್ನೂರು: ಸಮೀಪದ ಅರಹತೊಳಲಿನಲ್ಲಿ ಸೋಮವಾರ ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದಿದ್ದು, 13 ಜನ ಗಾಯಗೊಂಡಿದ್ದಾರೆ.

ಆ ಮನೆಯಲ್ಲಿ ನಾಲ್ಕೈದು ದಿನಗಳ ಹಿಂದಷ್ಟೇ ವಿವಾಹ ಸಮಾರಂಭ ನಡೆದಿತ್ತು. ಮನೆಯಲ್ಲಿ ಮಲಗಿದ್ದ ಸಂಬಂಧಿಕರು ಹಾಗೂ ನವವಿವಾಹಿತನ ಮೇಲೆ ಮನೆಯ ಚಾವಣಿ ಕುಸಿದಿದೆ. ನವವಿವಾಹಿತ ಗಣೇಶ್ ಹಾಗೂ ಆತನ ಅಕ್ಕನ ಮಗನಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಹೊಳೆ ಹೊನ್ನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್‍ನಾಯ್ಕ್, ಭದ್ರಾವತಿ ತಹಶೀಲ್ದಾರ್ ಪ್ರದೀಪ್, ಮುಖಂಡರಾದ ರಾಜೇಶ್ ಪಾಟೀಲ್, ರಂಗನಾಥ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT