ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಹುಣಸೋಡು ಸ್ಫೋಟ ಪ್ರಕರಣ:ಮೃತಪಟ್ಟಿದ್ದ 6ನೇ ವ್ಯಕ್ತಿ ಗುರುತು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೃತಪಟ್ಟಿದ್ದ ಆರನೇ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಪ್ರಕರಣ ಸಂಭವಿಸಿ 7 ತಿಂಗಳ ಬಳಿಕ ವ್ಯಕ್ತಿಯ ಗುರುತು ಸಿಕ್ಕಿದೆ.

ಮೃತ ವ್ಯಕ್ತಿ ಭದ್ರಾವತಿಯ ಕೆ.ಎಚ್.ನಗರದ ಆಟೊ ಚಾಲಕ ಶಶಿ (32) ಎಂದು ತಿಳಿದುಬಂದಿದೆ. 2021ರ ಜನವರಿಯಲ್ಲಿ ಹುಣಸೋಡು ಗ್ರಾಮದ ಬಳಿ ಇರುವ ಎಸ್.ಎಸ್.ಕ್ರಷರ್ ಬಳಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಅದರಲ್ಲಿ ಐವರ ಗುರುತು ಪತ್ತೆಯಾಗಿ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿತ್ತು. ಆರನೇ ವ್ಯಕ್ತಿಯ ದೇಹ ಸಂಪೂರ್ಣ ಛಿದ್ರವಾಗಿದ್ದರಿಂದ ಗುರುತು ಪತ್ತೆಯಾಗಿರಲಿಲ್ಲ. ಈಗ ಆ ವ್ಯಕ್ತಿಯ ಗುರುತು ಪತ್ತೆಯಾಗಿರುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಛಿದ್ರವಾಗಿದ್ದ ದೇಹದ ಭಾಗಗಳನ್ನು ವಶಕ್ಕೆ ಪೆಡದಿದ್ದ ಪೊಲೀಸರು ಅವುಗಳನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ದರು. ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಸೆ. 10ರಂದು ಡಿಎನ್ಎ ಪರೀಕ್ಷೆಯ ವರದಿ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು