ಮಾಂಸಕ್ಕೆ ಕಾಳಸಂತೆಯಲ್ಲಿ ಬೇಡಿಕೆ
ಕಾಡುಕೋಣ ಕಡವೆ ಜಿಂಕೆ ಮೊಲದ ಮಾಂಸಕ್ಕೆ ಕಾಳಸಂತೆಯಲ್ಲಿ ಬೇಡಿಕೆ ಇದೆ. ಬೆಲೆಯೂ ಹೆಚ್ಚಿದೆ. ಮಾಂಸದ ಉದ್ದೇಶದಿಂದಲೇ ಬೇಟೆಗಾರರು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದಾರೆ ಎಂದು ಶಂಕೆ ವ್ಯಕ್ತಪಡಿಸುತ್ತಾರೆ ಅರಣ್ಯ ಇಲಾಖೆಯ ಕೆಳ ಹಂತದ ಸಿಬ್ಬಂದಿ. ಅಲ್ಲದೆ ಹೆಚ್ಚಿನ ಸಂದರ್ಭಗಳಲ್ಲಿ ಬೇಟೆ ನಡೆದಿರುವುದು ಗೊತ್ತಾಗುವುದಿಲ್ಲ. ಅಂತಹ ಪ್ರಕರಣಗಳು ಮುಚ್ಚಿ ಹೋಗುತ್ತವೆ ಎನ್ನುತ್ತಾರೆ ಗ್ರಾಮಸ್ಥರು.