ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ತಂತ್ರಜ್ಞಾನ ಅತಿಯಾದರೆ ಅಮೃತವೂ ವಿಷದಂತೆ

ಹಾನಗಲ್ ಕುಮಾರಸ್ವಾಮಿಗಳ ಜಯಂತಿ ಕಾರ್ಯಕ್ರಮದಲ್ಲಿ ಬಿ.ವೈ. ಅರುಣಾದೇವಿ
Last Updated 4 ಅಕ್ಟೋಬರ್ 2021, 4:13 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಮಾಹಿತಿ ತಂತ್ರಜ್ಞಾನ ಕ್ಷೇತ್ರ ಅಗಾಧವಾಗಿ ಬೆಳೆದಿದ್ದು, ಹೇರಳವಾದ ಮಾಹಿತಿ, ಅಪಾರ ಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳುವ ಸವಾಲು ನಮ್ಮ ಎದುರು ಇದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಬಿ.ವೈ. ಅರುಣಾದೇವಿ ಹೇಳಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದಿಂದ ನಗರದ ಬೆಕ್ಕಿನ ಕಲ್ಮಠದಲ್ಲಿ ಭಾನುವಾರ ಆಯೋಜಿಸಿದ್ದ ಸಮಾಜಯೋಗಿ, ಮಹಾಸಭಾದ ಸಂಸ್ಥಾಪಕ ಹಾನಗಲ್ ಕುಮಾರಸ್ವಾಮಿಗಳ 154ನೇ ಜಯಂತಿ, ಜಿಲ್ಲಾ ಯುವ ಘಟಕ, ಜಿಲ್ಲಾ ಮಹಿಳಾ ಘಟಕ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಘಟಕಗಳ ಉದ್ಘಾಟನೆ ಸಮಾರಂಭದಲ್ಲಿ ಮಹಿಳಾ ಘಟಕ ಉದ್ಘಾಟಿಸಿಮಾತನಾಡಿದರು.

ಇಂದು ಎಲ್ಲವೂ ಮೊಬೈಲ್‌ ಮಯವಾಗಿದೆ. ತಂತ್ರಜ್ಞಾನ ವ್ಯಾಪಿಸದ ಕ್ಷೇತ್ರಗಳು ಉಳಿದಿಲ್ಲ. ಅತಿಯಾದರೆ ಅಮೃತವೂ ವಿಷ ಎಂಬ ಅರಿವಿಟ್ಟುಕೊಂಡು ಯುವಪೀಳಿಗೆ ತಂತ್ರಜ್ಞಾನವನ್ನು ಸರಿಯಾದ ರೀತಿಯಲ್ಲಿ ಬಳಸಬೇಕು. ಅದಕ್ಕಾಗಿ, ಪೋಷಕರು ಮಾರ್ಗದರ್ಶನ ನೀಡಬೇಕು. ಸಮಾಜದ ಅಭಿವೃದ್ಧಿಗೆ ಯುವಪೀಳಿಗೆಯ ಸಹಭಾಗಿತ್ವ ಪ್ರಮುಖವಾಗಿದ್ದು, ಅದಕ್ಕಾಗಿ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಆಗಬೇಕು. ಅದಕ್ಕಾಗಿ ತಂತ್ರಜ್ಞಾನ ಬಳಸಬೇಕು ಎಂದು ಹೇಳಿದರು.

ಹಾನಗಲ್ ಕುಮಾರಸ್ವಾಮಿಗಳು ಯೋಗಕ್ಕೆ ಒತ್ತು ನೀಡಿದ್ದರು. ಈ ಮೂಲಕ ಸದೃಢ ಸಮಾಜ ನಿರ್ಮಾಣ ಮಾಡಬೇಕು ಎನ್ನುವುದು ಅವರ ಉದ್ದೇಶವಾಗಿತ್ತು. ಅವರು ಇಂಗ್ಲಿಷ್‌ಗೂ ಒತ್ತು ನೀಡಿದ್ದರು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಅಗತ್ಯವಾಗಿದ್ದು, ಯುವಪೀಳಿಗೆಯನ್ನು ಅದರ ಕಡೆಗೆ ಕರೆದುಕೊಂಡು ಬರಬೇಕಾಗಿದೆಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ. ಅದಕ್ಕಾಗಿ, ಸಮಾಜ ಸಂಘಟನೆ ಮಾಡಬೇಕು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಮಾಜದ ಒಳಿತಿಗಾಗಿ ಸಾಕಷ್ಟು ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ‘ಸಮುದಾಯದಲ್ಲಿ ಈ ಹಿಂದೆ ಸಾಕಷ್ಟು ಸಮಸ್ಯೆಗಳಿದ್ದವು. ಆದರೀಗ ಪರಿಸ್ಥಿತಿ ಬದಲಾಗಿದೆ. ಎಲ್ಲರೂ ಒಂದೆಂಬ ಭಾವನೆ ಮೂಡಿದೆ. ಹೀಗಾಗಿ, ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿದ್ದಾರೆ’ಎಂದರು.

ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ಧನಂಜಯ್ ಮಹಾನಗರ ಪಾಲಿಕೆ ಘಟಕವನ್ನು ಉದ್ಘಾಟಿಸಿದರು. ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವ ಕೇಂದ್ರದ ಪೀಠಾಧ್ಯಕ್ಷ ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮಹಾಸಭಾದ ಅಧ್ಯಕ್ಷ ರುದ್ರಮುನಿ ಎಸ್. ಸಜ್ಜನ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್‌ ಸದಸ್ಯ ಎಸ್. ರುದ್ರೇಗೌಡ, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ, ಪ್ರಮುಖರಾದ ಎಚ್.ಎಂ. ರೇಣುಕಪ್ರಸನ್ನ, ನಟರಾಜ್ ಸಾಗರಹಳ್ಳಿ, ಮಹಾಂತೇಶ್ ಪಾಟೀಲ್, ಎಸ್.ಎಸ್. ಜ್ಯೋತಿಪ್ರಕಾಶ್, ಬಿ.ಡಿ. ಭೂಕಾಂತ್, ಎನ್.ಜೆ. ರಾಜಶೇಖರ್, ಜಿ.ಬೆನಕಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT