ಸಾಗರ: ತಾಲ್ಲೂಕಿನ ಚಿಪ್ಳಿ-ಲಿಂಗದಹಳ್ಳಿ ವ್ಯಾಪ್ತಿಯ ಅರಣ್ಯ ವಲಯದಲ್ಲಿ ಸೋಮವಾರ ರಾತ್ರಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಪುರುಷೋತ್ತಮ್ ಎಂಬಾತನನ್ನು ಬಂಧಿಸಿ ಬೀಟೆ ಮತ್ತು ಶ್ರೀಗಂಧದ ತುಂಡುಗಳನ್ನು ವಶಕ್ಕೆಪಡೆದಿದೆ.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಎರಡೂ ಇಲಾಖೆ ತಂಡಗಳು ಪುರುಷೋತ್ತಮ್ ಸಂಗ್ರಹಿಸಿಟ್ಟುಕೊಂಡಿದ್ದ ಶ್ರೀಗಂಧದ ತುಂಡು, ಬೀಟೆ ತುಂಡುಗಳ ಜೊತೆಗೆ ಪರವಾನಗಿ ಇಲ್ಲದೇ ಇರಿಸಿಕೊಂಡಿದ್ದ ಬಂದೂಕು ವಶಕ್ಕೆ ಪಡೆದು, ಅರಣ್ಯ ಇಲಾಖೆಯಲ್ಲಿ ಪ್ರಕರಣದಾಖಲಿಸಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ಎಸಿಎಫ್ ಶ್ರೀಧರ್ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಪ್ರಮೋದ್ ಡಿ.ಆರ್. ಸಹಕಾರದೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಗಿರೀಶ್ ಮತ್ತು ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಶ್ರೀಧರ್, ಅರಣ್ಯ ರಕ್ಷಕರಾದ ಪ್ರದೀಪ್, ಶಿವಾನಂದ್, ಸುಮಿತ, ವಾಹನ ಚಾಲಕ ಲೋಕೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.