ಹೊಳೆಹೊನ್ನೂರು: ಸಮೀಪದ ಅರಹತೊಳಲು ಕೈಮರ ಸರ್ಕಲ್ನ ರಾಷ್ಟ್ರೀಯ ಹೆದ್ದಾರಿಯ ಎನ್.ಡಿ.ಸುಂದರೇಶ್ ವೃತ್ತದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನು ಮತ್ತು ರಸ್ತೆಯ ಎರಡೂ ಬದಿಗಳಲ್ಲಿ ಕಟ್ಟಿದ್ದ ಪ್ಲೆಕ್ಸ್ಗಳನ್ನು ಪಟ್ಟಣದ ಠಾಣೆಯ ಪಿಐ ಶಿವಪ್ರಸಾದ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

ಕೈಮರ ಸರ್ಕಲ್ನಲ್ಲಿ ಟ್ರಾಫಿಕ್ ಜಾಮ್ನಿಂದ ಪ್ರತಿದಿನ ವಾಹನ ಸವಾರರು ಮತ್ತು ಸಾರ್ವಜನಿಕರು ಕಿರಿಕಿರಿ ಅನುಭವಿಸುತ್ತಿದ್ದರು. ಜೊತೆಗೆ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಪೊಲೀಸರು ತೆರವು ಕಾರ್ಯ ನಡೆಸಿದರು. ಕೆಲವು ಅಂಗಡಿ ಮಾಲೀಕರಿಗೆ ತೆರವು ಮಾಡಲು ಪೊಲೀಸರು 24 ಗಂಟೆಯ ಗಡುವು ನೀಡಿದ್ದಾರೆ.

ಈ ಸಂದರ್ಭದಲ್ಲಿ ಹೊಳೆಹೊನ್ನೂರು ಠಾಣೆಯ ಪಿಎಸ್ಐ ರಮೇಶ್, ಪಿಡಿಒ ಎನ್.ದೊರೆ, ಗ್ರಾ.ಪಂ. ಉಪಾಧ್ಯಕ್ಷ ಕೆ.ರಂಗನಾಥ, ಸದಸ್ಯ ಎನ್.ಟಿ.ಸಂಗನಾಥ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.