ಸೋಮವಾರ, ಜೂನ್ 27, 2022
28 °C

ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ; ಸಚಿವ ಕೆ.ಎಸ್. ಈಶ್ವರಪ್ಪ ಕಳವಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪಕ್ಷದ ಕೆಲವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಚಿವ ಸಂಪುಟ ವಿಸ್ತರಣೆ ಕುರಿತೂ  ತೀರ್ಮಾನವಾಗಿಲ್ಲ. ಅನಗತ್ಯ ಮಾತನಾಡುವವರ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ ಎಂದರು.

ಮೈಸೂರಿನಲ್ಲಿ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರ ಮಧ್ಯೆ ನಡೆಯುತ್ತಿರುವ ಗೊಂದಲ ಸರಿಯಲ್ಲ. ಆಯುಕ್ತೆ ಶಿಲ್ಪಾ ನಾಗ್ ಅವರು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲೇ ಕೆಲಸ ಮಾಡಿದ್ದಾರೆ. ಅವರು ದಕ್ಷ ಅಧಿಕಾರಿ. ಆದರೆ, ಮಾಧ್ಯಮದ ಮುಂದೆ ಹೇಳಿಕೆ ನೀಡಬಾರದಿತ್ತು ಎಂದರು.

ಮೇಯರ್ ಡಮ್ಮಿಯಲ್ಲ: ಮೇಯರ್ ಸುನೀತಾ ಅಣ್ಣಪ್ಪ ಅವರನ್ನು ಪಾಲಿಕೆಯ ಕೆಲವು ಸದಸ್ಯರು ಡಮ್ಮಿ ಎಂದು ವ್ಯಂಗ್ಯವಾಡುತ್ತಿದ್ದಾರೆ. ಇದು ಸರಿಯಲ್ಲ. ಸುನೀತಾ ಅವರು ಎಂ.ಕಾಂ, ಡಿಪ್ಲೊಮಾ ಪದವೀಧರೆ. ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಪಾಲಿಕೆ ಕಿಟ್‌ ವಿತರಣೆ ಸುದ್ದಿ ಕುರಿತು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರಲ್ಲಿ ತಪ್ಪೇನಿದೆ? ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಪಕ್ಷದ ಕಚೇರಿ ಬಳಸಿಕೊಂಡಿಲ್ಲವೇ ಎಂದು ತಿರುಗೇಟು ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು