ಭದ್ರಾವತಿ: ‘ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಭಾರತೀಯ ಸಂವಿಧಾನವು ಸಮಾಜಿಕ ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮೊದಲಾದ ಉದಾತ್ತ ಮೌಲ್ಯಗಳನ್ನು ಒಳಗೊಂಡಿದ್ದು, ದೇಶಕ್ಕೆ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ನೀಡಿದೆ’ ಎಂದು ನಗರಸಭೆ ಸದಸ್ಯ ಬಿ.ಕೆ. ಮೋಹನ್ ಹೇಳಿದರು.

ಬಾಪೂಜಿ ಹರಿಜನ (ಮಾದರ) ಸೇವಾ ಸಂಘದ ವತಿಯಿಂದ ಇಲ್ಲಿನ ಹುತ್ತಾ ಕಾಲೊನಿಯ ಚಂದ್ರಾಲಯದಲ್ಲಿ ಈಚೆಗೆ ನಡೆದ ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಅವರ ಜನ್ಮದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲ್ಯದಲ್ಲಿಯೇ ಸಾಮಾಜಿಕ ತಾರತಮ್ಯಗಳಿಂದಾಗಿ ನೋವುಂಡಿದ್ದ ಅಂಬೇಡ್ಕರ್, ಸಂವಿಧಾನದಲ್ಲಿ ಶೋಷಿತ ಸಮುದಾಯಗಳಿಗೆ ಸೂಕ್ತ ಸಾಮಾಜಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಸಿಗುವಂತೆ ಕ್ರಮ ವಹಿಸಿದರು. ಅಂಬೇಡ್ಕರ್ ಅವರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಏಕೆಂದರೆ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನದಲ್ಲಿ ಮಹಿಳೆಯರು, ಕಾರ್ಮಿಕರು, ರೈತರು ಸೇರಿ ಸಮಸ್ತ ಶೋಷಿತ ವರ್ಗಗಳ ಕಲ್ಯಾಣಕ್ಕೆ ಹಲವಾರು ಉಪಕ್ರಮಗಳಿವೆ’ ಎಂದರು.

‘ಬಾಬು ಜಗಜೀವನ ರಾಂ ಅವರೊಬ್ಬ ಶ್ರೇಷ್ಠ ರಾಜಕೀಯ ಮುತ್ಸದ್ಧಿ. ಕೇಂದ್ರ ಕೃಷಿ ಸಚಿವರಾದಾಗ ಅವರು ಹಸಿರು ಕ್ರಾಂತಿಗೆ ಪ್ರೋತ್ಸಾಹ ನೀಡಿ, ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗುವಂತೆ ಮಾಡಿದ್ದರು’ ಎಂದು ಹೇಳಿದರು.

ನಗರಸಭೆ ಸದಸ್ಯೆ ಲತಾ ಚಂದ್ರಶೇಖರ್, ತರೀಕೆರೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಟಿ. ಮಂಜುನಾಥ್ ಹಾಗೂ ಭದ್ರಾವತಿ ಆಕಾಶವಾಣಿಯ ಹಿರಿಯ ಉದ್ಘೋಷಕ ಎಂ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-42-132071522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.